'ಹಾತ್ ಸೆ ಹಾತ್ ಜೋಡೋ ಅಭಿಯಾನ್' ಲಾಂಛನ ಮತ್ತು ಮೋದಿ ಸರ್ಕಾರ ವಿರುದ್ಧ 'ಚಾರ್ಜ್ ಶೀಟ್' ಬಿಡುಗಡೆ ಮಾಡಿದ ಕಾಂಗ್ರೆಸ್
'ಹಾತ್ ಸೆ ಹಾತ್ ಜೋಡೋ ಅಭಿಯಾನ' ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ನವದೆಹಲಿ: 'ಹಾತ್ ಸೆ ಹಾತ್ ಜೋಡೋ ಅಭಿಯಾನ' ದ ಲಾಂಛನವನ್ನು ಕಾಂಗ್ರೆಸ್ ಪಕ್ಷ ಶನಿವಾರ ಬಿಡುಗಡೆ ಮಾಡಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಆರೋಪ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೈ ನಾಯಕರು ಇದೇ 26ರಿಂದ 2 ತಿಂಗಳು ಹಾತ್ ಸೆ ಹಾತ್ ಜೋಡೋ ಅಭಿಯಾನ ನಡೆಯಲಿದೆ ಎಂದಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಬಗ್ಗೆ ಮನೆಮನೆಗೆ ಸಂದೇಶ ಸಾರಲು ಈ ಅಭಿಯಾನ ನಡೆಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಮೋದಿ ಸರ್ಕಾರ ವಿರುದ್ಧ ಆರೋಪಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಾಯಕರು, ಆಯಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಆಯಾ ರಾಜ್ಯಗಳ ವಿರುದ್ಧವೂ ಅಗತ್ಯವಿದ್ದರೆ ಚಾರ್ಜ್ ಶೀಟ್ ತಯಾರಿಸುತ್ತದೆ ಎಂದರು. ಮೋದಿ ಸರ್ಕಾರದ ದುರಾಡಳಿತದಿಂದ ದೇಶದ ಜನರು ತೊಂದರೆ, ಸಮಸ್ಯೆ ಅನುಭವಿಸುತ್ತಿದ್ದು ಅವರ ಸಮಸ್ಯೆಗಳಿಗೆ ದನಿಯಾಗುತ್ತೇವೆ ಎಂದರು.
ಇಂದು ಸುದ್ದಿಗೋಷ್ಠಿಯಲ್ಲಿ ವೇಣುಗೋಪಾಲ್ ಹೇಳಿದ್ದೇನು?: 130 ದಿನಗಳ ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ಪಕ್ಷ ದೇಶದ ಎಲ್ಲಾ ವರ್ಗದ ಜನತೆಯಿಂದ ಸಾಕಷ್ಟು ಮಾಹಿತಿ ಪಡೆದಿದ್ದಾರೆ. ಲಕ್ಷಾಂತರ ಮಂದಿಯ ಜೊತೆ ನಡೆದುಕೊಂಡು ಹೋಗುವಾಗ ರಾಹುಲ್ ಗಾಂಧಿಯವರು ಜನರ ಹಲವು ಕಷ್ಟಗಳು, ಸಮಸ್ಯೆಗಳನ್ನು ಕೇಳಿದ್ದಾರೆ. ಮೋದಿ ಸರ್ಕಾರದ ದುರಾಡಳಿತದಿಂದ ಜನರು ಅನುಭವಿಸುತ್ತಿರುವ ನೋವು ನಮಗೆ ಅರ್ಥವಾಗುತ್ತಿದೆ ಎಂದರು.
ಇಂದು ಜಮ್ಮು-ಕಾಶ್ಮೀರದ ಕತುವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈರಾಂ ರಮೇಶ್, ಮನೆಮನೆಗೆ ಕಾಂಗ್ರೆಸ್ ನ ಪ್ರಚಾರ 6 ಲಕ್ಷ ಹಳ್ಳಿಗಳ ಮತ್ತು 2.5 ಲಕ್ಷ ಗ್ರಾಮ ಪಂಚಾಯತ್ ಗಳ 10 ಲಕ್ಷ ಮತಗಟ್ಟೆಗಳಿಗೆ ಮನೆ ಮನೆಗೆ ತಲುಪುತ್ತೇವೆ ಎಂದರು.
ಹಾತ್ ಸೆ ಹಾತ್ ಜೋಡೋ ಅಭಿಯಾನವನ್ನು ಕಾಂಗ್ರೆಸ್ ಜನವರಿ 26ರಿಂದ ಮಾರ್ಚ್ 26ರವರೆಗೆ ಹಮ್ಮಿಕೊಂಡಿದೆ. ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ಪ್ರಚಾರ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


