ಈ ವರ್ಷದ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಮುಖ್ಯ ಅತಿಥಿ
ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಈ ವರ್ಷ 74ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನವದೆಹಲಿ: ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಈ ವರ್ಷ 74ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಅವರು ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಆಗಮಿಸುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಅರಬ್ ರಿಪಬ್ಲಿಕ್ ದೇಶ ಈಜಿಪ್ಟ್ ನ ಅಧ್ಯಕ್ಷರು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಈಜಿಪ್ಟ್ ಸೇನೆಯ ಮಿಲಿಟರಿ ಪಡೆ ಸಹ ಭಾರತದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಲಿದೆ ಎಂದು ಹೇಳಿದೆ.
ತಮ್ಮ ಭಾರತ ಭೇಟಿ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಇಲ್ಲಿನ ಉದ್ಯಮ ಸಮುದಾಯವನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅವರ ಡೊತೆ ಈಜಿಪ್ಟ್ ನ ಉನ್ನತ ಮಟ್ಟದ ನಿಯೋಗ ಆಗಮಿಸಲಿದೆ. 68 ವರ್ಷದ ಈಜಿಪ್ಟ್ ಅಧ್ಯಕ್ಷರು ಭಾರತಕ್ಕೆ ಇದೇ 24ರಂದು ಆಗಮಿಸಲಿದ್ದು ಅವರ ಭೇಟಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಸಹಾಯವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


