240 ಪ್ರಯಾಣಿಕರಿದ್ದ ಮಾಸ್ಕೋ-ಗೋವಾ ವಿಮಾನಕ್ಕೆ ಬಾಂಬ್ ಬೆದರಿಕೆ!
ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪಣಜಿ: ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.
ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ 240 ಪ್ರಯಾಣಿಕರ ಹೊತ್ತು ಟೇಕ್ ಆಫ್ ಆಗಿತ್ತು. ಈ ವೇಳೆ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಉಜ್ಬೇಕಿಸ್ತಾನಕ್ಕೆ ತಿರುಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ‘ಅಜುರ್ ಏರ್’ ನಿರ್ವಹಿಸುತ್ತಿರುವ ವಿಮಾನ (AZV2463) ಭಾರತೀಯ ವಾಯುಪ್ರದೇಶ ಪ್ರವೇಶಿಸುವ ಮುನ್ನವೇ, ಅದನ್ನು ಬೇರೆ ಕಡೆಗೆ ಕಳುಹಿಸಲಾಯಿತು. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ರಾತ್ರಿ 12.30ಕ್ಕೆ ದಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಮೂಲಕ ಬಂದಿರುವುದಾಗಿ ತಿಳಿಯುತ್ತಲೇ ವಿಮಾನವನ್ನು ಬೇರೆಡೆಗೆ ತಿರುಗಿಸಲಾಯಿತು ಎಂದು ಅವರು ಹೇಳಿದರು.
ಎರಡು ವಾರಗಳ ಹಿಂದೆ, ಮಾಸ್ಕೋ–ಗೋವಾ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ವಿಮಾನವನ್ನು ಗುಜರಾತ್‌ನ ಜಾಮ್‌ನಗರದಲ್ಲಿ ತುರ್ತಾಗಿ ಲ್ಯಾಂಡ್ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


