ಜಮ್ಮುವಿನಲ್ಲಿ ಅವಳಿ ಸ್ಫೋಟ; 9 ಮಂದಿಗೆ ಗಾಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಜಮ್ಮು ತಲುಪಲು ಕೇವಲ ಎರಡು ದಿನ ಬಾಕಿಯಿರುವಂತೆಯೇ, ಶನಿವಾರ ನಗರದ ಹೊರವಲಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಜಮ್ಮು ತಲುಪಲು ಕೇವಲ ಎರಡು ದಿನ ಬಾಕಿಯಿರುವಂತೆಯೇ, ಶನಿವಾರ ನಗರದ ಹೊರವಲಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನರ್ವಾಲ್‌ನ ಟ್ರಾನ್ಸ್ ಪೋರ್ಟ್ ನಗರದ ಕಾರಿನ ರಿಪೇರಿ ಅಂಗಡಿಯಲ್ಲಿ ನಿಲ್ಲಿಸಿದ್ದ ಎಸ್‌ಯುವಿ ಕಾರಿನಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು, ಇದಕ್ಕೆ ಐಇಡಿಗಳನ್ನು ಬಳಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಗಣರಾಜ್ಯೋತ್ಸವ ಹಾಗೂ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದರೂ ಈ ದಾಳಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಅಪರಾಧಿಗಳನ್ನು ಬಂಧಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಭದ್ರತಾ ಏಜೆನ್ಸಿಗಳಿಗೆ ಸೂಚಿಸಿದ್ದಾರೆ.
"ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೊಲೆರೋ ಎಸ್ ಯುವಿನಲ್ಲಿ ಮೊದಲ ಸ್ಫೋಟ ಸಂಭವಿಸಿದ್ದು, ಐವರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಕೇಶ್ ಸಿಂಗ್ ತಿಳಿಸಿದ್ದಾರೆ.
ಮೊದಲ ಸ್ಫೋಟ ಸಂಭವಿಸಿದ ಸ್ಥಳದಿಂದ 50 ಮೀಟರ್ ದೂರದಲ್ಲಿ 15 ನಿಮಿಷಗಳ ಅಂತರದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಳಿ ಸ್ಫೋಟಗಳಿಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆಎಂದು ಅವರು ತಿಳಿಸಿದ್ದಾರೆ.
ಸ್ಫೋಟದ ಬಳಿಕ ಆಸ್ಪತ್ರೆಗೆ ಒಂಬತ್ತು ಜನರನ್ನು ಕರೆತರಲಾಯಿತು ಎಂದು ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


