ತಮಿಳುನಾಡು: ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ
ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಮೂವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಚೆನ್ನೈ: ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತರನ್ನು ಮುತ್ತುಕುಮಾರ್ (31), ಜ್ಯೋತಿಬಾಬು (19) ಮತ್ತು ಎಸ್.ಭೂಪಾಲನ್ (41) ಎಂದು ಗುರುತಿಸಲಾಗಿದೆ.
ಕಿಲ್ವೀಡಿ ಗ್ರಾಮದಲ್ಲಿ ನಡೆದ ದ್ರೌಪತಿ ಅಮ್ಮನವರ ಉತ್ಸವದ ಸಂದರ್ಭದಲ್ಲಿ ಪಟ್ಟಣದಾದ್ಯಂತ ಮೆರವಣಿಗೆಯಲ್ಲಿ ದೇವರ ವಿಗ್ರಹವನ್ನು ಹೊತ್ತ ಕ್ರೇನ್‌ನಲ್ಲಿ ಎಂಟು ಜನರು ಇದ್ದರು. ಮೆರವಣಿಗೆ ವೇಳೆ ಕ್ರೇನ್ ಕುಸಿದು ಬಿದ್ದಿದ್ದು, ಮೇಲಿದ್ದ ಎಂಟು ಮಂದಿ ನೆಲಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದಾಗ ಸುಮಾರು 1,500 ಜನರು ರಸ್ತೆ ಮತ್ತು ದೇವಸ್ಥಾನದ ಆವರಣದಲ್ಲಿ ಇದ್ದರು.
ಕ್ರೇನ್ ಕುಸಿದು ಬಿದ್ದ ನಂತರ ಗಾಯಾಳುಗಳನ್ನು ಅರ್ಕೋಣಂ ಸರ್ಕಾರಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೂ ನಾಲ್ವರಿಗೆ ಆಗಿರುವ ಗಾಯಗಳು ಗಂಭೀರವಾಗಿದ್ದು, ಗಾಯಾಳುಗಳ ಮೇಲೆ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಅಪಘಾತದ ಕಾರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ನೆಮಿಲಿ ಪೊಲೀಸರು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


