ದೇಶ

ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ: 5 ಸಾವು, ಹಲವರು ಗಂಭೀರ

ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ: 5 ಸಾವು, ಹಲವರು ಗಂಭೀರ
ಬಿಹಾರ ನಕಲಿ ಮದ್ಯ ದುರಂತ (ಸಾಂಕೇತಿಕ ಚಿತ್ರ)
Published On :

ಪಾಟ್ನಾ: ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಬಿಹಾರದ ಸಿವಾನ್ ಜಿಲ್ಲೆಯ ಲಕಾರಿ ನಬಿಗಂಜ್‌ನ ಬಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಸೋಮವಾರ ಐದಕ್ಕೆ ಏರಿದೆ.

ನಕಲಿ ಮದ್ಯ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿರುವ ಎಲ್ಲರೂ ಸಿವಾನ್‌ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಈ ನಕಲಿ ಮದ್ಯ ಸೇವನೆಯಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಇದುವರೆಗೆ 16 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ವರ್ಷ ಡಿಸೆಂಬರ್ 21 ರಂದು ದಾನಪುರದ ಗಟಾರವೊಂದರಲ್ಲಿ ಬಚ್ಚಿಟ್ಟಿದ್ದ ಅಕ್ರಮ ಮದ್ಯದ ಬಾಟಲಿಗಳನ್ನು ಬಿಹಾರ ಪೊಲೀಸರು ವಶಪಡಿಸಿಕೊಂಡ ಕೆಲವೇ ದಿನಗಳಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.