ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ: ರಾಷ್ಟ್ರಪತಿ ಮುರ್ಮು
74ನೇ ಗಣರಾಜ್ಯೋತ್ಸವದ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ ಎಂದು ಬುಧವಾರ ಹೇಳಿದ್ದಾರೆ.

ನವದೆಹಲಿ: 74ನೇ ಗಣರಾಜ್ಯೋತ್ಸವದ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ ಎಂದು ಬುಧವಾರ ಹೇಳಿದ್ದಾರೆ.
ರಾಷ್ಟ್ರಪತಿಗಳಾಗಿ ಇಂದು ಮೊದಲ ಬಾರಿಗೆ ದೇಶ ಉದ್ದೇಶಿ ಭಾಷಣ ದ್ರೌಪದಿ ಮುರ್ಮು ಅವರು, "ನಾವು ಗಣರಾಜ್ಯೋತ್ಸವವನ್ನು ಆಚರಿಸಿದಾಗ, ನಾವು ಸಾಧಿಸಿದ್ದನ್ನು ಒಟ್ಟಾಗಿ, ರಾಷ್ಟ್ರವಾಗಿ ಸಂಭ್ರಮಿಸುತ್ತೇವೆ" ಎಂದು ಹೇಳಿದರು.
"ಸಂವಿಧಾನದ ಕರಡು ಸಮಿತಿಯ ನೇತೃತ್ವ ವಹಿಸಿ, ಅದಕ್ಕೆ ಅಂತಿಮ ರೂಪ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ಸದಾ ಕೃತಜ್ಞತೆ ಸಲ್ಲಿಸುತ್ತದೆ" ಎಂದು ರಾಷ್ಟ್ರಪತಿಗಳು ತಿಳಿಸಿದರು.
"ಆರಂಭಿಕ ಕರಡು ಸಿದ್ಧಪಡಿಸಿದ ನ್ಯಾಯಶಾಸ್ತ್ರಜ್ಞ ಬಿಎನ್ ರಾವ್ ಮತ್ತು ಸಂವಿಧಾನ ರಚನೆಯಲ್ಲಿ ಸಹಾಯ ಮಾಡಿದ ಇತರ ತಜ್ಞರು, ಅಧಿಕಾರಿಗಳ ಪಾತ್ರವನ್ನು ನಾವು ನೆನಪಿಸಿಕೊಳ್ಳಬೇಕು. ಆ ಅಸೆಂಬ್ಲಿಯ ಸದಸ್ಯರು ಭಾರತದ ಎಲ್ಲಾ ಪ್ರದೇಶಗಳು ಮತ್ತು ಸಮುದಾಯಗಳನ್ನು ಪ್ರತಿನಿಧಿಸಿದ್ದರು ಮತ್ತು ಅದರಲ್ಲಿ 15 ಮಹಿಳೆಯರೂ ಇದ್ದರು ಎಂಬ ಅಂಶದ ಬಗ್ಗೆ ನಾವು ಹೆಮ್ಮೆಪಡುತ್ತೇವೆ ಎಂದಿದ್ದಾರೆ.
ಕೋವಿಡ್ ಸಾಂಕ್ರಾಮಿಕದಿಂದ ಹಲವು ವಲಯಗಳು ನಷ್ಟ ಅನುಭವಿಸಿವೆ. ಆದರೆ ಸರ್ಕಾರದ ಸಮಯೋಚಿತ ಮತ್ತು ಪೂರ್ವಭಾವಿ ಕ್ರಮಗಳು ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದನ್ನಾಗಿ ಮಾಡಿದೆ ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


