ಜಾರಿ ನಿರ್ದೇಶನಾಲಯದಿಂದ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ
ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ...

ಅಹಮದಾಬಾದ್: ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಸದ್ಯ ಗುಜರಾತ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಗೋಖಲೆ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಇಡಿ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ.
ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗುಜರಾತ್ ಪೊಲೀಸರು ಗೋಖಲೆ ಅವರನ್ನು ದೆಹಲಿಯಲ್ಲಿ ಡಿಸೆಂಬರ್ 29 ರಂದು ಬಂಧಿಸಿದ್ದರು.
ಸೇತುವೆ ಕುಸಿತದ ದುರಂತದ ನಂತರ ಮೊರ್ಬಿ ಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವೆಚ್ಚದ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಡಿಸೆಂಬರ್‌ನಲ್ಲಿ ಗುಜರಾತ್ ಪೊಲೀಸರು ಗೋಖಲೆ ಅವರನ್ನು ಎರಡು ಬಾರಿ ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


