74ನೇ ಗಣರಾಜ್ಯೋತ್ಸವ: ವಿಭಿನ್ನ ಕಲಾಕೃತಿ ಮೂಲಕ ಭಾರತೀಯರಿಗೆ ಶುಭಾಶಯ ಕೋರಿದ ಗೂಗಲ್ ಡೂಡಲ್
ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾಶಯಗಳನ್ನು ಕೋರಿದೆ.

ನವದೆಹಲಿ: ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾಶಯಗಳನ್ನು ಕೋರಿದೆ.
ಗುಜರಾತ್ನ ಅಹಮದಾಬಾದ್ ಮೂಲದ ಕಲಾವಿದ ಪಾರ್ಥ್ ಕೊಥೇಕರ್ ಅವರು, ಭಾರತದ ಗಣರಾಜ್ಯೋತ್ಸವದ ಅಂಗವಾಗಿ ರಚಿಸಿದ ಕಾಗದದ ಕಲಾಕೃತಿಯ ವಿಡಿಯೋವನ್ನು ಗೂಗಲ್ ಹಂಚಿಕೊಂಡಿದೆ.
1950 ಜನವರಿ 26 ರಂದು ಭಾರತವು ಸಂವಿಧಾನದ ಅಂಗೀಕಾರದೊಂದಿಗೆ ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿಕೊಂಡಿತು. ಈ ಶುಭ ದಿನವನ್ನು ಗೂಗಲ್ ಡೂಡಲ್ ಕೂಡ ನೆನಪಿಸಿಕೊಂಡು ದೇಶದ ಜನತೆಗೆ ಶುಭಕೋರಿದೆ.
ಗೂಗಲ್ ತನ್ನ ಮುಖಪುಟದಲ್ಲಿ ಹಂಚಿಕೊಂಡ ಕಲಾಕೃತಿಯನ್ನು ಕೈಗಳಿಂದ ಕತ್ತರಿಸಿದ ಕಾಗದದಿಂದ ರಚಿಸಲಾಗಿದೆ. ಇದರಲ್ಲಿ ರಾಷ್ಟ್ರಪತಿ ಭವನ, ಇಂಡಿಯಾ ಗೇಟ್, ಸಿಆರ್‌ಎಫ್‌ಪಿ ಕವಾಯತು ತಂಡ ಮತ್ತು ಮೋಟಾರ್‌ಸೈಕಲ್ ಸವಾರರು ಸೇರಿದಂತೆ ಗಣರಾಜ್ಯೋತ್ಸವದ ಪರೇಡ್‌ನ ಹಲವು ಅಂಶಗಳನ್ನು ಕಾಣಬಹುದಾಗಿದೆ.
ಈ ನಡುವೆ ದೇಶದಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕರ್ತವ್ಯ ಪಥದಲ್ಲಿ ಆಕರ್ಷಕ ಮಿಲಿಟರಿ ಮತ್ತು ಸಾಂಸ್ಕೃತಿಕ ವೈಭವ ಪ್ರದರ್ಶನ ನಡೆಯಲಿದೆ. ವಿವಿಧ ರಾಜ್ಯಗಳ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು ಪ್ರತಿನಿಧಿಸುವ ಟ್ಯಾಬ್ಲೋಗಳ ಮೆರವಣಿಗೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


