ಜಮ್ಮು-ಕಾಶ್ಮೀರದ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್: ತನಿಖೆ
ಜಮ್ಮು-ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಮಾಜಿ ಶಾಸಕನ ನಿವಾಸದಲ್ಲಿ ಗ್ರೆನೇಡ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುರನ್ಕೋಟ್ ನ ಮಾಜಿ ಶಾಸಕ ಚೌಧರಿ ಮೊಹಮ್ಮದ್ ಅಕ್ರಮ್ ಅವರ ನಿವಾಸದ ಹೊರ ಭಾಗದಲ್ಲಿ ಒಂದು ಗ್ರೆನೇಡ್ ಪತ್ತೆಯಾಗಿದ್ದು, ಪ್ರಾಸಂಗಿಕವಾಗಿ ನಾಲ್ಕು ದಿನಗಳ ಹಿಂದೆ ಲಘು ಸ್ಫೋಟ ಸಂಭವಿಸಿತ್ತು.
ಪೂಂಚ್ ನಲ್ಲಿ ಸೇನೆ ಬುಧವಾರ (ಜ.25) ರಂದು ಸೇನೆ ಉಗ್ರರ ಎರಡು ಅಡಗುದಾಣಗಳನ್ನು ಪತ್ತೆ ಮಾಡಿತ್ತು ಹಾಗೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿತ್ತು.
ಒಂದು ಅಡಗುದಾಣ ರಟ್ಟಾ ಜಬಾರದ ಅರಣ್ಯದಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಧೋಬಾ ಅರಣ್ಯದಲ್ಲಿ ಪತ್ತೆಯಾಗಿದೆ ಎಂದು ಸೇನೆ ಮಾಹಿತಿ ನೀಡಿದೆ.
ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವುದಕ್ಕೆ ಜಮ್ಮು-ಕಾಶ್ಮೀರ ಸರ್ಕಾರ ಭಯೋತ್ಪಾದನಾ ನಿಗಾ ಗುಂಪು ಸ್ಥಾಪಿಸಿದ್ದು 2 ವಿವಿಧ ಹುದ್ದೆಗಳನ್ನು ಈ ಸ್ಕ್ವಾಡ್ ಅಡಿಯಲ್ಲಿ ಸೃಷ್ಟಿಸಿದೆ. ಇನ್ನು ಜಮ್ಮು-ಕಾಶ್ಮೀರ ಪೊಲೀಸರು ಉಗ್ರ ಸಂಘಟನೆ ಸೇರಲು ಯತ್ನಿಸುತ್ತಿದ್ದ 5 ಮಂದಿ ಯುವಕರನ್ನು ತಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


