ದೇಶ

74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾದ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Published On :

ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾದ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ. ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

ದೇಶದ ಕಲೆ, ಸಂಸ್ಕೃತಿ, ಸೇನಾ ಸಾಮರ್ಥ್ಯವನ್ನು ದೇಶ ಮತ್ತು ಜಗತ್ತಿನ ಮುಂದೆ ತೆರೆದಿಡುವ 74ನೇ ಗಣರಾಜ್ಯೋತ್ಸವಕ್ಕೆ ದೆಹಲಿಯ ರಾಜಪಥ ಸಜ್ಜಾಗಿದೆ. ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯ ದಿನವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವುದರೊಂದಿಗೆ ಗಣರಾಜ್ಯೋತ್ಸವ ಪರೇಡ್ ಸಮಾರಂಭ ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.