ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ಯೋಜನೆ: ದೆಹಲಿ ವಿಶ್ವವಿದ್ಯಾಲಯದ 24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
2002 ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದಡಿ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

ನವದೆಹಲಿ: 2002 ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದಡಿ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು ಇಂದು (ಜ.27) ರಂದು ವಶಕ್ಕೆ ಪಡೆದಿದ್ದಾರೆ.
ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ಜೆಎನ್ ಯು ಹಾಗೂ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿವಿಗಳಲ್ಲಿ ವಿವಾದಿತ ಸಾಕ್ಷ್ಯಚಿತ್ರ ಪ್ರದರ್ಶನದ ವಿಷಯವಾಗಿ ಗಲಾಟೆ ಉಂಟಾಗಿತ್ತು. ಈ ಬೆನ್ನಲ್ಲೇ ದೆಹಲಿ ವಿವಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಬೆಳವಣಿಗೆ ನಡೆದಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ 13 ವಿದ್ಯಾರ್ಥಿಗಳ ಬಂಧನ
ಉತ್ತರ ವಿಭಾಗದ ಉಪ ಆಯುಕ್ತ ಸಾಗರ್ ಸಿಂಗ್ ಕಲ್ಸಿ ಮಾತನಾಡಿ, ಸಂಜೆ 4 ಗಂಟೆ ವೇಳೆಗೆ 20 ಮಂದಿ ಕಲಾ ವಿಭಾಗದಿಂದ ಹೊರಬಂದು ನಿರ್ಬಂಧಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯತ್ನಿಸಿದರು. ಈ ನಡೆ ಶಾಂತಿ ಹಾಗೂ ಪ್ರಶಾಂತ ವಾತಾವರಣ ಕದಡುವ ಸಾಧ್ಯತೆ ಇರುವುದರಿಂದ ಅವರನ್ನು ಅಲ್ಲಿಂದ ತೆರಳುವಂತೆ ಹೇಳಲಾಯಿತು. ಆದರೆ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಂತಿಯುತವಾಗಿ ವಶಕ್ಕೆ ಪಡೆಯಲಾಯಿತು ಎಂದು ಹೇಳಿದ್ದಾರೆ. ಒಟ್ಟು 24 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


