ದೇಶ

ಕಮಲ್ ಹಾಸನ್ 'ಎಂಎನ್ ಎಂ' ಪಕ್ಷದ ವೆಬ್​ಸೈಟ್​ ಹ್ಯಾಕ್!

ನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ ಪಕ್ಷದ ವೆಬ್‌ಸೈಟ್ ಹ್ಯಾಕ್ ಆಗಿದೆ ಎಂದು ಪಕ್ಷವು ಶುಕ್ರವಾರ ತಿಳಿಸಿದೆ.

ಕಮಲ್ ಹಾಸನ್ 'ಎಂಎನ್ ಎಂ' ಪಕ್ಷದ ವೆಬ್​ಸೈಟ್​ ಹ್ಯಾಕ್!
ನಟ ಕಮಲ್ ಹಾಸನ್
Published On :

ಚೆನ್ನೈ: ನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ ಪಕ್ಷದ ವೆಬ್‌ಸೈಟ್ ಹ್ಯಾಕ್ ಆಗಿದೆ ಎಂದು ಪಕ್ಷವು ಶುಕ್ರವಾರ ತಿಳಿಸಿದೆ. ವೆಬ್‌ಸೈಟ್ ಹ್ಯಾಕ್ ಆದ ಕೆಲ ಗಂಟೆಗಳ ನಂತರ  ಅಧಿಕೃತ ವೆಬ್‌ಸೈಟ್ ನ್ನು ಕೆಲವು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ ಮತ್ತು ಅಂತಹ ಬೆದರಿಕೆಗೆ ಹೆದರುವುದಿಲ್ಲ ಮತ್ತು ಅದಕ್ಕೆ ತಕ್ಕ ಉತ್ತರವನ್ನು ನೀಡುತ್ತದೆ ಎಂದು ಎಂಎನ್ ಎಂ ಪಕ್ಷದ ಟ್ವೀಟರ್ ಖಾತೆಯಲ್ಲಿ ಹೇಳಲಾಗಿದೆ. 

ಜನವರಿ 30 ರಂದು ಕಾಂಗ್ರೆಸ್ ಪಕ್ಷದೊಂದಿಗೆ ಎಂಎನ್ ಎಂನ್ನು ವಿಲೀನಗೊಳಿಸುವುದಾಗಿ ವೆಬ್ ಸೈಟ್ ನಲ್ಲಿ ಮಾಡಲಾದ ಪೋಸ್ಟ್ ಪಕ್ಷದ ಕಾರ್ಯಕರ್ತರನ್ನು ಅಚ್ಚರಿಗೊಳಿಸಿದರೆ, ಅನೇಕರ ಕಣ್ಣು ಕೆಂಪಾಗಿಸಿತ್ತು. ನಂತರ ಆ ಹೇಳಿಕೆಯನ್ನು ಹಿಂಪಡೆಯಲಾಗಿದೆ ಎಂದು ಹೇಳಲಾಗಿತ್ತು. ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನದಂತಹ ನಿರ್ಧಾರ ತೆಗೆದುಕೊಂಡಿಲ್ಲ. ಇದು ಹ್ಯಾಕರ್ ಗಳ ಕೈ ಕೆಲಸ ಎಂದು ಪಕ್ಷದ ವಕ್ತಾರರೊಬ್ಬರು ಹೇಳಿದ್ದಾರೆ. 

ಫೆಬ್ರವರಿ 27 ರಂದು ನಡೆಯಲಿರುವ ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಎಂಎನ್ ಎಂ ಘೋಷಿಸಿತ್ತು. ಕಳೆದ ತಿಂಗಳು ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ಕಮಲ್ ಹಾಸನ್ ಪಾಲ್ಗೊಂಡಿದ್ದನ್ನು ಸ್ಮರಿಸಬಹುದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.