ಕಾಶ್ಮೀರ: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು,...

ಅವಂತಿಪೋರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ಭಾಗವಹಿಸಿದ್ದಾರೆ.
ಇಂದು ಜಮ್ಮು ಮತ್ತು ಕಾಶ್ಮೀರದ ಲೆಥ್‌ಪೋರಾದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮ ಸಹೋದರ ರಾಹುಲ್ ಗಾಂಧಿ ಜತೆ ಪ್ರಿಯಾಂಕಾ ಗಾಂಧಿ ಅವರು ಹೆಜ್ಜೆ ಹಾಕಿದರು.
ಲೆಥ್‌ಪೋರಾದಲ್ಲಿ ವಿರಾಮಕ್ಕಾಗಿ ಯಾತ್ರೆ ನಿಲ್ಲಿಸುವ ಮುನ್ನ ಬಿಗಿ ಭದ್ರತೆಯ ನಡುವೆ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರೊಂದಿಗೆ ಹೆಜ್ಜೆ ಹಾಕಿದರು.
ಯಾತ್ರೆಯು ಅವಂತಿಪೋರಾದಿಂದ ಪುನರಾರಂಭಗೊಂಡಿದ್ದು, ಅಲ್ಲಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮತ್ತು ಅವರ ಮಗಳು ಇಲ್ತಿಜಾ ಮುಫ್ತಿ ಅವರು ಸಹ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದು, ರಾಹುಲ್ ಗಾಂಧಿಗೆ ಸಾಥ್ ನೀಡುತ್ತಿದ್ದಾರೆ.
ಈ ವೇಳೆ ರಾಹುಲ್ ಗಾಂಧಿ ಅವರು ಫೆಬ್ರವರಿ 2019 ರಲ್ಲಿ ಲೆಥ್‌ಪೋರಾದಲ್ಲಿ ಉಗ್ರರು ಭದ್ರತಾ ಪಡೆಗಳ ಬಸ್ ಅನ್ನು ಸ್ಫೋಟಿಸಿದ ಸ್ಥಳದಲ್ಲಿ ಪುಷ್ಪಗುಚ್ಛವನ್ನು ಇಟ್ಟು ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


