ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ
ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.

ನವದೆಹಲಿ: ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.
"ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷವಾಗಿರುವ ಹಿನ್ನೆಲೆಯಲ್ಲಿ 'ಆಜಾದಿ ಕಾ ಅಮೃತ್ ಮಹೋತ್ಸವ' ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ 'ಅಮೃತ್ ಉದ್ಯಾನ್' ಎಂದು ಸಾಮಾನ್ಯ ಹೆಸರನ್ನು ನೀಡಿದ್ದಾರೆ" ಎಂದು ರಾಷ್ಟ್ರಪತಿಗಳ ಪತ್ರಿಕಾ ಉಪ ಕಾರ್ಯದರ್ಶಿ ನವಿಕಾ ಗುಪ್ತಾ ಅವರು ತಿಳಿಸಿದ್ದಾರೆ.
ಅಮೃತ್ ಉದ್ಯಾನವನ್ನು ಭಾನುವಾರ ಸಾರ್ವಜನಿಕರಿಗಾಗಿ ತೆರೆಯಲಾಗುವುದು ಮತ್ತು ಈ ಬಾರಿ ಸುಮಾರು ಎರಡು ತಿಂಗಳ ಕಾಲ ತೆರೆದಿರುತ್ತದೆ ಎಂದು ಅವರು ಹೇಳಿದ್ದಾರೆ.
ಜನವರಿ 31 ರಿಂದ ಮಾರ್ಚ್ 26 ರವರೆಗೆ ಈ ಉದ್ಯಾನವನ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ. ಇದರ ಹೊರತಾಗಿ, ಕೆಲವು ದಿನಗಳನ್ನು ವಿಶೇಷವಾಗಿ ವಿಕಲಚೇತನರಿಗೆ, ರೈತರು ಮತ್ತು ಮಹಿಳೆಯರುಗೆ ಮೀಸಲಿಡಲಾಗಿದೆ ಎಂದು ನವಿಕಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


