ದೇಶ

ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!

ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ.

ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!
ಇಂಡಿಗೋ ವಿಮಾನ
Published On :

ಮುಂಬೈ: ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ.

ನಾಗ್ಪುರದಿಂದ ಮುಂಬೈಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರೊಬ್ಬರು ವಿಮಾನವು ಮುಂಬೈನಲ್ಲಿ ಇಳಿಯಲು ಸಮೀಪಿಸುತ್ತಿದ್ದಾಗ ತುರ್ತು ನಿರ್ಗಮನದ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದರು. ಈ ಕೃತ್ಯಕ್ಕಾಗಿ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. 

ಅಂತೆಯೇ ವಿಮಾನಯಾನ ಸಂಸ್ಥೆ ಪ್ರಯಾಣಿಕನ ಯಾವುದೇ ವಿವರ ಹಂಚಿಕೊಂಡಿಲ್ಲ.. ಅಂತೆಯೇ ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದೂ ಇಂಡಿಗೋ ಸಂಸ್ಥೆ ಸ್ಪಷ್ಟಪಡಿಸಿದೆ. 

ಏನಿದು ಘಟನೆ?
ನಾಗ್ಪುರದಿಂದ ಮುಂಬೈಗೆ 6E-5274 ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನವು ಅಗಸದಲ್ಲಿರುವುವಾಗ ಮತ್ತು ಲ್ಯಾಂಡಿಂಗ್‌ಗೆ ಸಮೀಪಿಸುತ್ತಿದ್ದಾಗ ತುರ್ತು ನಿರ್ಗಮನದ ಬಾಗಿಲನ್ನು ತೆಗೆಯಲು ಪ್ರಯತ್ನಿದ್ದಾರೆ. ಆದರೆ ಈ ವೇಳೆ ಇದನ್ನು ಗಮನಿಸಿದ ಸಿಬ್ಬಂದಿ ಪೈಲಟ್ ಗಮನಕ್ಕೆ ತಂದಿದ್ದು, ಕೂಡಲೇ ಪೈಲಟ್ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

ಅಂತೆಯೇ ವಿಮಾನವು ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿದ್ದಾಗ ತುರ್ತು ನಿರ್ಗಮನವನ್ನು ಅನಧಿಕೃತವಾಗಿ ಹಾಳುಮಾಡಿದ್ದಕ್ಕಾಗಿ ಪ್ರಯಾಣಿಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.