ದೇಶ

ಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ: ಶ್ರೀನಗರದಲ್ಲಿ ಧ್ವಜಾರೋಹಣದ ಬಳಿಕ ರಾಹುಲ್ ಗಾಂಧಿ 

ಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ: ಶ್ರೀನಗರದಲ್ಲಿ ಧ್ವಜಾರೋಹಣದ ಬಳಿಕ ರಾಹುಲ್ ಗಾಂಧಿ 
ಕಾಶ್ಮೀರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
Published On :

ಶ್ರೀನಗರ: ಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
 
ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ನಡೆದ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಶ್ರೀನಗರದ ಲಾಲ್ ಚೌಕ್ ನ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರೊಂದಿಗೆ ಭದ್ರತೆಯ ನಡುವೆ ಧ್ವಜಾರೋಹಣ ನೆರವೇರಿಸಿದರು. ಈ ಬಳಿಕ ಮಾತನಾಡಿದ ಅವರು ಲಾಲ್ ಚೌಕ್ ನಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ. ದ್ವೇಷ ಸೋಲಲಿದೆ ಪ್ರೀತಿ ಎಂದಿಗೂ ಗೆಲ್ಲಲಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಭಾರತದಲ್ಲಿ ಭರವಸೆಯ ಹೊಸ ಬೆಳಗು ಮೂಡಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 

ಕಳೆದ ವರ್ಷದ ಸೆ.07 ರಂದು ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದ ರಾಹುಲ್ ಗಾಂಧಿ 12 ರಾಜ್ಯಗಳು 2 ಕೇಂದ್ರಾಡಳಿತ ಪ್ರದೇಶದ ಮೂಲಕ ಕಾಶ್ಮೀರ ತಲುಪಿದ್ದಾರೆ. ಸೋಮವಾರದಂದು ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಮಾಡುವ ಮೂಲಕ ಭಾರತ್ ಜೋಡೋ ಯಾತ್ರೆ ಪೂರ್ಣಗೊಳ್ಳುತ್ತದೆ. ರಾಹುಲ್ ಗಾಂಧಿ ನೇತೃತ್ವದ ತಂಡದ ಯಾತ್ರಿಗಳು ಶ್ರೀನಗರದ ನೆಹರೂ ಪಾರ್ಕ್ ನಲ್ಲಿ ತಂಗಲಿದ್ದಾರೆ. 

ಸೋಮವಾರ (ಜ.30) ರಂದು 23 ರಾಜಕೀಯ ಪಕ್ಷಗಳ ನಾಯಕರೊಂದಿಗೆ ಎಸ್ ಕೆ ಸ್ಟೇಡಿಯಂ ನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.