ಸರ್ವಪಕ್ಷ ಸಭೆ: ಸಂಸತ್ತಿನಲ್ಲಿ ಅದಾನಿ ಗ್ರೂಪ್ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಒತ್ತಾಯ
ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ನಿಯಮಗಳ ಅಡಿಯಲ್ಲಿ ಪ್ರತಿಯೊಂದು ವಿಷಯವನ್ನು ಚರ್ಚಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ ಮತ್ತು ಕಲಾಪವನ್ನು ಸುಗಮವಾಗಿ ನಡೆಸಲು...

ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ನಿಯಮಗಳ ಅಡಿಯಲ್ಲಿ ಪ್ರತಿಯೊಂದು ವಿಷಯವನ್ನು ಚರ್ಚಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ ಮತ್ತು ಕಲಾಪವನ್ನು ಸುಗಮವಾಗಿ ನಡೆಸಲು ಪ್ರತಿಪಕ್ಷಗಳ ಸಹಕಾರ ಕೋರಿದೆ.
ಇಂದು ನಡೆದ ಸರ್ವಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಆರ್‌ಜೆಡಿಯ ಮನೋಜ್ ಝಾ, ಡಿಎಂಕೆ, ಎಡಪಕ್ಷಗಳು ಮತ್ತು ಇತರರು ಅದಾನಿ ಗ್ರೂಪ್ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್‌ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರುಗಳು ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಈ ಕಂಪನಿಗಳಲ್ಲಿ ಹೂಡಿಕೆ ಮಾಡಿದವರೂ ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಹಿಂಡನ್‌ಬರ್ಗ್ ರಿಸರ್ಚ್ ವರದಿಯನ್ನು ಅದಾನಿ ಗ್ರೂಪ್ ಸ್ಪಷ್ಟವಾಗಿ ತಳ್ಳಿಹಾಕಿದೆ.
ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರ ಇಂದು ಕರೆದಿದ್ದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ನಿಯಮಗಳ ಅಡಿಯಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಸದನವನ್ನು ಸುಗಮವಾಗಿ ನಡೆಸಲು ನಾವು ಪ್ರತಿಪಕ್ಷಗಳ ಸಹಕಾರವನ್ನು ಕೋರುತ್ತೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


