ಮಹಾತ್ಮ ಗಾಂಧೀಜಿ ಪುಣ್ಯ ಸ್ಮರಣೆ: ಬಾಪು ಚಿಂತನೆಗಳನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ
ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ.

ನವದೆಹಲಿ: ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಮಹಾತ್ಮ ಗಾಂಧೀಜಿ ಮರಣ ಹೊಂದಿದ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ.
ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಣಾಮಗಳು. ಅವರ ಆಳವಾದ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇನೆ. ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುವುದಾಗಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಭಾರತದ ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


