'ನಕಲಿ ಗ್ಯಾರಂಟಿ' ನೀಡುವವರ ಬಗ್ಗೆ ಎಚ್ಚರಿಕೆ ವಹಿಸಿ: ಪ್ರಧಾನಿ ಮೋದಿ
ಕರ್ನಾಟಕದಲ್ಲಿನ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಕುಟುಂಬ-ಕೇಂದ್ರಿತ ರಾಜಕೀಯ ಪಕ್ಷಗಳು ನೀಡುತ್ತಿರುವ ನಕಲಿ ಗ್ಯಾರಂಟಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಶಾಹದೋಲ್: ಕರ್ನಾಟಕದಲ್ಲಿನ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಕುಟುಂಬ-ಕೇಂದ್ರಿತ ರಾಜಕೀಯ ಪಕ್ಷಗಳು ನೀಡುತ್ತಿರುವ ನಕಲಿ ಗ್ಯಾರಂಟಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಮಧ್ಯಪ್ರದೇಶದ ಶಾಹದೋಲ್ನಲ್ಲಿಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ನಕಲಿ ಗ್ಯಾರಂಟಿ ನೀಡುವ ಪಕ್ಷಗಳ ಬಗ್ಗೆ ಎಚ್ಚರದಿಂದಿರಿ. ಅಂತಹ ಜನರು ತಮ್ಮ ರಾಜಕೀಯವೇ ಗ್ಯಾರಂಟಿ ಇಲ್ಲದಿದ್ದರೂ ಗ್ಯಾರಂಟಿ ಯೋಜನೆಗಳನ್ನು ತರುವುದಾಗಿ ಹೇಳುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸೇರಿದಂತೆ ಕುಟುಂಬ ಕೇಂದ್ರಿತ ಪಕ್ಷಗಳು ಒಟ್ಟಾಗಿವೆ. ಆಸ್ಪತ್ರೆಗಳಲ್ಲಿ ಆಯುಷ್ಮನ್ ಭಾರತ್ ಕಾರ್ಡ್ ನಿಂದ ರೂ.5 ಲಕ್ಷ ವರೆಗಿನ ಚಿಕಿತ್ಸೆ ಗ್ಯಾರಂಟಿಯಾಗಿ ದೊರೆಯಲಿದೆ. ಇದು ಮೋದಿ ಗ್ಯಾರಂಟಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದೇಶದಲ್ಲಿ 3 ಕೋಟಿಗೂ ಅಧಿಕ ಜನರಿಗೆ ಡಿಜಿಟಲ್ ಆಯುಷ್ಮನ್ ಕಾರ್ಡ್ ವಿತರಣೆಯನ್ನು ಆರಂಭಿಸಿದ ಪ್ರಧಾನಿ, ರಾಣಿ ದುರ್ಗಾವತಿ ಅವರ 500ನೇ ಜನ್ಮ ದಿನಾಚರಣೆಯನ್ನು ಭಾರತದಾದ್ಯಂತ ಆಚರಿಸಲಾಗುವುದು, ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಘೋಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


