ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ಕ್ಕೆ ಆರಂಭ
ಸಂಸತ್ತಿನ ಮುಂಗಾರು ಅಧಿವೇಶನ(Mansoon session of Parliament) ಜುಲೈ 20ರಂದು ಆರಂಭವಾಗಲಿದೆ. ಜುಲೈ 20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ.

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ(Mansoon session of Parliament) ಜುಲೈ 20ರಂದು ಆರಂಭವಾಗಲಿದೆ. ಜುಲೈ 20ರಂದು ಆರಂಭವಾಗುವ ಅಧಿವೇಶನ ಆಗಸ್ಟ್ 11ರವರೆಗೆ ಮುಂದುವರಿಯಲಿದೆ.
ಸಂಸತ್ತು ಕಲಾಪಗಳು ಸುಗಮವಾಗಿ, ಸರಾಗವಾಗಿ ಮತ್ತು ದೇಶದ ಜನರಿಗೆ ಉಪಯೋಗವಾಗುವಂತಹ ಚರ್ಚೆಗಳನ್ನು ಕಲಾಪ ವೇಳೆ ನಡೆಸಿಕೊಂಡು ಹೋಗಲು ಎಲ್ಲಾ ಪಕ್ಷಗಳ ಸದಸ್ಯರು ಸಹಕಾರ ನೀಡಬೇಕೆಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮನವಿ ಮಾಡಿಕೊಂಡಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ನಡೆಸಲು ವಿರೋಧ ಪಕ್ಷಗಳು ಇತ್ತೀಚೆಗೆ ಸಭೆ ಸೇರಿ ನಿರ್ಧಾರ ತೆಗೆದುಕೊಂಡಿರುವುದರಿಂದ ಅಧಿವೇಶನವು ಈ ಬಾರಿ ಕುತೂಹಲದಿಂದ ಕೂಡಿದೆ.
ಇದರ ಜೊತೆಗೆ, ಏಕರೂಪ ನಾಗರಿಕ ಸಂಹಿತೆಗಾಗಿ ಪ್ರಧಾನಿ ಮೋದಿ ಅವರು ಬಲವಾಗಿ ಪ್ರದಿಪಾದಿಸಿರುವ ಸಂದರ್ಭದಲ್ಲಿ ಈ ವಿಷಯದ ಕುರಿತು ಸಮಾಲೋಚನೆಗಳನ್ನು ನಡೆಸುವ ಸಂದರ್ಭದಲ್ಲಿ ಸಂಸತ್ತು ಕಲಾಪ ನಡೆಯುತ್ತಿದೆ.
ಇದನ್ನೂ ಓದಿ: ಜುಲೈ 3ನೇ ವಾರ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ ಸಾಧ್ಯತೆ, ಕಲಾಪ ಮಧ್ಯಭಾಗದಲ್ಲಿ ಹೊಸ ಸಂಸತ್ತು ಭವನಕ್ಕೆ ಶಿಫ್ಟ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


