ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಅಪರಿಚಿತರ ಗುಂಡಿನ ದಾಳಿಗೆ ಇಬ್ಬರ ಸಾವು

ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ಸ್ವಯಂಸೇವಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಅಪರಿಚಿತರ ಗುಂಡಿನ ದಾಳಿಗೆ ಇಬ್ಬರ ಸಾವು
ಸಂಗ್ರಹ ಚಿತ್ರ
Published On :

ಇಂಫಾಲ: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ಸ್ವಯಂಸೇವಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.

ತಡರಾತ್ರಿ ಖೋಯಿಜುಮಂತಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. "ಗ್ರಾಮದ ಸ್ವಯಂಸೇವಕರು" ತಾತ್ಕಾಲಿಕ ಬಂಕರ್‌ನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿದ್ದಾರೆ.

ಭದ್ರತಾ ಪಡೆಗಳು ಸ್ಥಳಕ್ಕೆ ತೆರಳುವವರೆಗೂ ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಇದುವರೆಗೆ ಮೈಟೆಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ.

ಶೇ.40ರಷ್ಟಿರುವ ಬುಡಕಟ್ಟು ಜನಾಂಗದವರು, ನಾಗಾಗಳು ಮತ್ತು ಕುಕಿಗಳು  ಬೆಟ್ಟದ ಪ್ರದೇಶಗಳಲ್ಲಿ ವಾಸವಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.