ಬಿಜೆಪಿಯ ತಂತ್ರಕ್ಕೆ ಎನ್ ಸಿಪಿಯ ಕೆಲ ನಾಯಕರು ಬಲಿ: ಶರದ್ ಪವಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ವಿಪಕ್ಷಗಳ ಮೈತ್ರಿಕೂಟ ರಚನೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿದ್ದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಬಿಜೆಪಿ ನೀಡಿರುವ ಶಾಕ್ ಅಂತಿಂತದಲ್ಲ.

ಮುಂಬೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ವಿಪಕ್ಷಗಳ ಮೈತ್ರಿಕೂಟ ರಚನೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿದ್ದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಬಿಜೆಪಿ ನೀಡಿರುವ ಶಾಕ್ ಅಂತಿಂತದಲ್ಲ. ಹಲವು ದಶಕಗಳಿಂದ ಕಟ್ಟಿ ಬೆಳೆಸಿದ ಪಕ್ಷ ಒಡೆದಿದ್ದು, ಅದನ್ನು ಮತ್ತೆ ಕಟ್ಟುವುದು ಅಷ್ಟು ಸುಲಭವಲ್ಲಾ. ತನ್ನ ಸಂಬಂಧಿ ಅಜಿತ್ ಪವಾರ್ ಹಾಗೂ ಎಂಟು ಮಂದಿಯ ಶಾಸಕರ ಬಂಡಾಯದಿಂದ ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದ ಎನ್ ಸಿಪಿ ಭವಿಷ್ಯ ಮಂಕಾಗಿದೆ.
ಇಂದು ಕರಾದ್ ನಲ್ಲಿ ಎನ್ ಸಿಪಿ ಕಾರ್ಯಕರ್ತರು ಹಾಗೂ ಬೆಂಬಲಿಗರ ಶಕ್ತಿ ಪ್ರದರ್ಶನ ನಡೆಸಿದ ಶರದ್ ಪವಾರ್, ಮಹಾರಾಷ್ಟ್ರ ಹಾಗೂ ದೇಶದಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸುವ ಬಿಜೆಪಿ ತಂತ್ರಗಳಿಗೆ ನಮ್ಮಲ್ಲಿನ ಕೆಲವರು ಬಲಿಯಾಗಿದ್ದಾರೆ ಎಂದು ಆರೋಪಿಸಿದರು. ಶಾಂತಿಪ್ರಿಯ ನಾಗರಿಕರಲ್ಲಿ ಭಯವನ್ನು ಉಂಟುಮಾಡುವ ಶಕ್ತಿಗಳ ವಿರುದ್ಧ ನಾವು ಹೋರಾಡಬೇಕಾಗಿದೆ ಎಂದು ಕರೆ ನೀಡಿದರು.
ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದು 82 ವರ್ಷದ ಹಿರಿಯ ರಾಜಕಾರಣಿ ಶರದ್ ಪವಾರ್ ಜನರಲ್ಲಿ ಮನವಿ ಮಾಡಿದರು. ಇದಕ್ಕೂ ಮುನ್ನಾ ಗುರು ಪೂರ್ಣಿಮೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಮೊದಲ ಮುಖ್ಯಮಂತ್ರಿ ದಿವಂಗತ ಚವಾಣ್ ಅವರ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು. ಸೋಮವಾರ ಬೆಳಗ್ಗೆ ಪುಣೆಯಿಂದ ಕರಾದ್‌ಗೆ ಹೊರಟ ಶರದ್ ಪವಾರ್ ಅವರಿಗೆ, ದಾರಿಯುದ್ದಕ್ಕೂ ರಸ್ತೆಬದಿಯಲ್ಲಿ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳು ಅಭಿನಂದಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


