ದೇಶ

ಎನ್ ಸಿಪಿ ಪಕ್ಷದಿಂದ ಸಂಸದ ಪ್ರಫುಲ್ ಪಟೇಲ್, ಸುನಿಲ್ ತಾತ್ಕರೆ ವಜಾ: ಶರದ್ ಪವಾರ್ ಘೋಷಣೆ

ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಸಂಸದರಾದ ಸುನಿಲ್ ತಾತ್ಕರೆ, ಪ್ರಫುಲ್ ಪಟೇಲ್ ಅವರ ಹೆಸರನ್ನು ಪಕ್ಷದ ಸಂಸದರ ಪಟ್ಟಿಯಿಂದ ತೆಗೆದುಹಾಕುವುದಾಗಿ ಪಕ್ಷದ ಮುಖಂಡ ಶರದ್ ಪವಾರ್ ಘೋಷಿಸಿದ್ದಾರೆ.

ಎನ್ ಸಿಪಿ ಪಕ್ಷದಿಂದ ಸಂಸದ ಪ್ರಫುಲ್ ಪಟೇಲ್, ಸುನಿಲ್ ತಾತ್ಕರೆ ವಜಾ: ಶರದ್ ಪವಾರ್ ಘೋಷಣೆ
ಶರದ್ ಪವಾರ್
Published On :

ಮುಂಬೈ: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಸಂಸದರಾದ ಸುನಿಲ್ ತಾತ್ಕರೆ, ಪ್ರಫುಲ್ ಪಟೇಲ್ ಅವರ ಹೆಸರನ್ನು ಪಕ್ಷದ ಸಂಸದರ ಪಟ್ಟಿಯಿಂದ ತೆಗೆದುಹಾಕುವುದಾಗಿ ಪಕ್ಷದ ಮುಖಂಡ ಶರದ್ ಪವಾರ್ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶರದ್ ಪವಾರ್, ಎನ್ ಸಿಪಿಯಿಂದ ಇಬ್ಬರೂ ಸಂಸದರನ್ನು ತೆಗೆದುಹಾಕಿದ್ದೇವೆ ಎಂದು ಪವಾರ್ ಘೋಷಿಸಿದ್ದಾರೆ.

ಸಂಸದರನ್ನು ಅನರ್ಹಗೊಳಿಸುವಂತೆ ಎನ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಆಗ್ರಹಿಸಿದ್ದರು.  ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಟೇಲ್, ಎನ್ ಸಿಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಜಯಂತ್ ಪಾಟೀಲ್ ಬದಲು ತಾತ್ಕರೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಭಾನುವಾರ ನಡೆದ ತಮ್ಮ ಸಂಬಂಧಿ ಅಜಿತ್ ಪವಾರ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಶರದ್ ಪವಾರ್ ಇಂದು ಉಚ್ಛಾಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.