ಮೋದಿಯಂತಹ ನಾಯಕ ಮತ್ತೊಬ್ಬರಿಲ್ಲ: ಅಜಿತ್ ಪವಾರ್
ಪ್ರಧಾನಿ ನರೇಂದ್ರ ಮೋದಿಯಂತಹ ನಾಯಕ ಮತ್ತೊಬ್ಬರಿಲ್ಲ ಎಂದು ಮಹಾರಾಷ್ಟ್ರ ನೂತನ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಂಗಳವಾರ ಹೇಳಿದ್ದಾರೆ.

ಮುಂಬೈ: ಪ್ರಧಾನಿ ನರೇಂದ್ರ ಮೋದಿಯಂತಹ ನಾಯಕ ಮತ್ತೊಬ್ಬರಿಲ್ಲ ಎಂದು ಮಹಾರಾಷ್ಟ್ರ ನೂತನ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಂಗಳವಾರ ಹೇಳಿದ್ದಾರೆ.
"ದೇಶವು ಅವರ(ಮೋದಿ) ನಾಯಕತ್ವದಲ್ಲಿ ಮುನ್ನಡೆಯುತ್ತಿದೆ. ಅವರನ್ನು ಬೆಂಬಲಿಸಲು ನಾವು ಸರ್ಕಾರಕ್ಕೆ ಸೇರಿಕೊಂಡಿದ್ದೇವೆ" ಎಂದು ದಕ್ಷಿಣ ಮುಂಬೈನಲ್ಲಿ ತಮ್ಮ ಎನ್‌ಸಿಪಿ ಬಣದ ಹೊಸ ಕಚೇರಿಯನ್ನು ಉದ್ಘಾಟಿಸಿದ ನಂತರ ಅಜಿತ್ ಪವಾರ್ ಹೇಳಿದ್ದಾರೆ.
ದೇಶದಲ್ಲಿ ಮೋದಿಯಂತಹ ನಾಯಕ ಮತ್ತೊಬ್ಬರಿಲ್ಲ. ಅವರಿಗೆ ಪರ್ಯಾಯ ನಾಯಕ ಇಲ್ಲ ಎಂದು ಎನ್ ಸಿಪಿ ಬಂಡಾಯ ನಾಯಕ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಲು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಗ್ಪುರಕ್ಕೆ ತೆರಳಿರುವುದರಿಂದ ಖಾತೆ ಹಂಚಿಕೆ ವಿಳಂಬವಾಗುತ್ತಿದ್ದು, ಶೀಘ್ರದಲ್ಲೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.
"ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಅಸಮಾಧಾನದ ಪ್ರಶ್ನೆಯೇ ಇಲ್ಲ" ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಡಿಸಿಎಂ ಉತ್ತರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


