ಎನ್‌ಎಚ್‌ಆರ್‌ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರಕ್ಕೆ ಸುಪ್ರೀಂ ನೋಟಿಸ್
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ದಲ್ಲಿ ಖಾಲಿ ಇರುವ ಮೂರು ಹುದ್ದೆಗಳನ್ನು ಭರ್ತಿ ಮಾಡದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಎನ್‌ಎಚ್‌ಆರ್‌ಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ, ಈ ಸಂಬಂಧ ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
ಸೆಪ್ಟೆಂಬರ್ 11, 2021, ಏಪ್ರಿಲ್ 4, 2022 ಮತ್ತು ಜನವರಿ 4, 2023 ರಿಂದ ಈ ಮೂರು ಹುದ್ದೆಗಳು ಖಾಲಿ ಇರುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ ಮೂರು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶನ ನೀಡುವಂತೆ ಕೋರಿ ವಕೀಲ ರಾಧಾಕಾಂತ ತ್ರಿಪಾಠಿ ಅವರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಎನ್‌ಎಚ್‌ಆರ್‌ಸಿಯಲ್ಲಿ ಮೂವರು ಸದಸ್ಯರನ್ನು ನೇಮಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇದರಿಂದ ಆಯೋಗದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತಿದೆ. ಇದು ಕಾನೂನು ಮತ್ತು ನ್ಯಾಯದ ಆಡಳಿತದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


