ಟೆಂಪೋ- ಕಾರು ಭೀಕರ ರಸ್ತೆ ಅಪಘಾತ: ಪತಿ, ಪತ್ನಿ, ಮಗ ಸೇರಿ 6 ಮಂದಿ ಸಾವು, ಹಲವರಿಗೆ ಗಾಯ
ಆಗ್ರಾ ಜಿಲ್ಲೆಯ ಖೇರಗಢ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಸೈಯಾನ್- ಖೇರಗಢ ರಸ್ತೆಯಲ್ಲಿ ಟೆಂಪೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಆಗ್ರಾ: ಆಗ್ರಾ ಜಿಲ್ಲೆಯ ಖೇರಗಢ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಸೈಯಾನ್- ಖೇರಗಢ ರಸ್ತೆಯಲ್ಲಿ ಟೆಂಪೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಟೆಂಪೋದಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 11.30ರ ಸುಮಾರಿಗೆ ಹತ್ತು ಮಂದಿ ಇದ್ದ ಟೆಂಪೋ ಸೈಯಾನ್ನಿಂದ ಖೇರಗಡಕ್ಕೆ ಹೋಗುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ.
ಖೇರಗಢ ಪೊಲೀಸ್ ಠಾಣೆ ವ್ಯಾಪ್ತಿಯ ನಾಗಲಾ ಉದಯ ಗ್ರಾಮದ ನಿವಾಸಿ ಟೆಂಪೋ ಸವಾರ ಜಯಪ್ರಕಾಶ್, ಪತ್ನಿ ಬ್ರಜೇಶ್ದೇವಿ, 12 ವರ್ಷದ ಮಗ ಸುಮಿತ್ ಹಾಗು ವೃದ್ಧ ಬ್ರಜ್ ಮೋಹನ್ ಶರ್ಮಾ, ಟೆಂಪೋ ಚಾಲಕ ಭೋಲಾ ನಿವಾಸಿ ಅಯೆಲಾ ಮತ್ತು ಖೇರಗಢದ ಮನೋಜ್ (30) ಎಂಬವರು ಸಾವನ್ನಪ್ಪಿದ್ದಾರೆ.
ಇನ್ನುಳಿದ ನಾಲ್ವರು ಗಾಯಾಳುಗಳಿಗೆ ಎಸ್.ಎನ್. ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಖೇರಗಢ ಎಸಿಪಿ ಮಹೇಶ್ ಕುಮಾರ್ ಮಾಹಿತಿ ನೀಡಿದರು.
ಕಾರು ಚಾಲಕ ಬಂಟಿ ಹಾಗು ಆತನ ಗೆಳೆಯರಾದ ಪಿಂಕು ಮತ್ತು ಬನಿಯಾ ಎಂಬವರೊಂದಿಗೆ ಖೇರಘರ್‌ನಲ್ಲಿ ಸಂತೋಷ ಕೂಟ ಆಯೋಜಿಸಿದ್ದನಂತೆ. ಇದಾದ ನಂತರ ಬಂಟಿ ಇಬ್ಬರನ್ನೂ ಹಳ್ಳಿಯಲ್ಲಿ ಬಿಟ್ಟು ಕಾರಿನಲ್ಲಿ ಮನೆಗೆ ಬರುತ್ತಿದ್ದ. ಚಾಲಕ ಬಂಟಿ ಪಾನಮತ್ತನಾದ್ದರಿಂದ ಘಟನೆ ಸಂಭವಿಸಿದೆ. ಪಿಂಕು ಮತ್ತು ಬನಿಯಾ ಎಂಬಿಬ್ಬರನ್ನು ಬಂಧಿಸಲಾಗಿದೆ. ಕಾರು ಚಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


