ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ: ಉಪ ರಾಷ್ಟ್ರಪತಿ ಧನಕರ್
ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.

ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.
ಇಂದು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.
"ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ" ಎಂದು ಅವರು ಹೇಳಿದರು.
"ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ' ಎಂದು ಧನಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


