ದೇಶ

ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬೇಕು: ಅಜಿತ್ ಪವಾರ್

ಜನರ ಕಲ್ಯಾಣಕ್ಕಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರಲು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು ಬಯಸುತ್ತೇನೆ" ಎಂದು ಎನ್‌ಸಿಪಿ ಬಂಡಾಯ ನಾಯಕ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ...

ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಬೇಕು: ಅಜಿತ್ ಪವಾರ್
ಅಜಿತ್ ಪವಾರ್
Published On :

ಮುಂಬೈ: "ಜನರ ಕಲ್ಯಾಣಕ್ಕಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರಲು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು ಬಯಸುತ್ತೇನೆ" ಎಂದು ಎನ್‌ಸಿಪಿ ಬಂಡಾಯ ನಾಯಕ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

ಇಂದು ಮುಂಬೈನ ಬಾಂದ್ರಾದಲ್ಲಿ ತಾವು ಕರೆದಿದ್ದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅಜಿತ್ ಪವಾರ್, 2004ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿ ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನಗಳನ್ನು ಪಡೆದಿತ್ತು. ಆ ಸಮಯದಲ್ಲಿ ನಾವು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ, ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಎನ್ ಸಿಪಿಯವರೇ ಮುಖ್ಯಮಂತ್ರಿಯಾಗಿ ಇರುತ್ತಿದ್ದರು ಎಂದರು.

2017ರಲ್ಲೂ ವರ್ಷಾ ಬಂಗಲೆಯಲ್ಲಿ ಸಭೆ ನಡೆಸಿದ್ದೆವು. ಪಕ್ಷದ ಹಿರಿಯ ನಾಯಕರಾದ ಛಗನ್ ಭುಜಬಲ್, ಜಯಂತ್ ಪಟೇಲ್, ನಾನು ಮತ್ತು ಇನ್ನೂ ಹಲವರು ಅಲ್ಲಿಗೆ ಹೋಗಿದ್ದೆವು. ಬಿಜೆಪಿಯ ಹಲವಾರು ನಾಯಕರು ಸಹ ಅಲ್ಲಿದ್ದರು. ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ಬಗ್ಗೆಯೂ ಚರ್ಚೆ ಆಗಿತ್ತು. ಆದರೆ ನಂತರ ನಮ್ಮ ಪಕ್ಷ ಒಂದು ಹೆಜ್ಜೆ ಹಿಂದಕ್ಕೆ ಸರಿಯಿತು ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಇದೇ ವೇಳೆ 83 ವರ್ಷದ ಶರದ್ ಪವಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಜಿತ್ ಪವಾರ್, "ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟ ನಾಯಕರು ನಿವೃತ್ತರಾಗುತ್ತಾರೆ. ಆದರೆ ನಿಮಗೆ 83 ವರ್ಷ. ನೀವು ಯಾವಾಗ ನಿವೃತ್ತಿಯಾಗುತ್ತೀರಿ?" ಎಂದು ತಮ್ಮ ಚಿಕ್ಕಪ್ಪನನ್ನು ಪ್ರಶ್ನಿಸಿದರು.

"ನೀವು ಎಲ್ಲರ ಮುಂದೆ ನನ್ನನ್ನು ಖಳನಾಯಕನಂತೆ ಬಿಂಬಿಸಿದ್ದೀರಿ. ನನಗೆ ಅವರ(ಶರದ್ ಪವಾರ್) ಬಗ್ಗೆ ಇನ್ನೂ ಆಳವಾದ ಗೌರವವಿದೆ ... ಐಎಎಸ್ ಅಧಿಕಾರಿಗಳು 60ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ... ರಾಜಕೀಯದಲ್ಲಿಯೂ - ಬಿಜೆಪಿ ನಾಯಕರು 75 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ. ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರ ಉದಾಹರಣೆಯನ್ನು ನೀವು ನೋಡಬಹುದು ... ಅದು ಹೊಸ ಪೀಳಿಗೆಗೆ ಅನುವು ಮಾಡಿಕೊಡುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.