ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ, ಐವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ರಜೌರಿಯ ಥಾನಮಂಡಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಾಹನವೊಂದು ಆಯತಪ್ಪಿ ಆಳವಾದ ಕಮರಿಗೆ ಉರುಳಿದೆ ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೌರಿಯ ಜಿಎಂಸಿಯ ವೈದ್ಯಕೀಯ ಅಧೀಕ್ಷಕ ಡಾ ಮೆಹಮೂದ್ ಹುಸೇನ್ ಬಜಾರ್ ಅವರು ಮಾಹಿತಿ ನೀಡಿದ್ದಾರೆ.
ಮೃತರನ್ನು ಭಾಂಗೈ ನಿವಾಸಿಗಳಾದ ಶಮೀಮ್ ಅಖ್ತರ್ (55), ರುಬಿನಾ ಕೌಸರ್ (35), ಜರೀನಾ ಬೇಗಂ ಮತ್ತು ಮೊಹಮ್ಮದ್ ಯೂನಿಸ್ (38) ಎಂದು ಗುರುತಿಸಲಾಗಿದೆ. ಘಟನೆ ವೇಳೆ ವಾಹನದಲ್ಲಿ 12 ಮಂದಿ ಇದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


