ರಾಜಸ್ಥಾನ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ
7 ವರ್ಷಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದ ರಾಜಸ್ಥಾನದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಬರಾನ್‌ನ ಪೋಕ್ಸೊ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ತೀರ್ಪು ನೀಡಿದೆ ಎಂದು ಸರ್ಕಾರ...

ಕೋಟಾ: 7 ವರ್ಷಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದ ರಾಜಸ್ಥಾನದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಬರಾನ್‌ನ ಪೋಕ್ಸೊ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ತೀರ್ಪು ನೀಡಿದೆ ಎಂದು ಸರ್ಕಾರ ಅಭಿಯೋಜಕರು ಗುರುವಾರ ತಿಳಿಸಿದ್ದಾರೆ.
ಜಾಮೀನಿನ ಮೇಲೆ ಹೊರಗಿದ್ದ 32 ವರ್ಷದ ಶಿಕ್ಷಕ ವಿಶ್ವೇಂದ್ರ ಮೀನಾ ಅವರನ್ನು ಬುಧವಾರ ಶಿಕ್ಷೆ ಪ್ರಕಟಿಸಿದ ಬಳಿಕ ಜೈಲಿಗೆ ಕಳುಹಿಸಲಾಗಿದೆ. ಮೀನಾಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹರಿನಾರಾಯಣ್ ಸಿಂಗ್ ಹೇಳಿದ್ದಾರೆ.
ಗ್ರಾಮದ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನ ವಿರುದ್ಧ ಬಾಲಕಿಯ ತಂದೆ ನವೆಂಬರ್ 10, 2016 ರಂದು ಅಂತಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬುಂದಿ ಜಿಲ್ಲೆಯ ಗೆಂಡೋಲಿ ಪ್ರದೇಶದ ನಿವಾಸಿ ಮೀನಾ, ತನ್ನ ಹೀನ ಕೃತ್ಯವನ್ನು ಫೋನ್‌ನಲ್ಲಿ ಚಿತ್ರೀಕರಿಸಿ, ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕುವುದಾಗಿ ಮತ್ತು ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ತನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು ಎಂದು ಬಾಲಕಿಯ ತಂದೆ ಆರೋಪಿಸಿದ್ದರು.
ನಂತರ ಶಿಕ್ಷಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


