ದೇಶ

ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ: ಮೂರು ಬೋಗಿಗಳು ಸುಟ್ಟು  ಭಸ್ಮ; ಪ್ರಯಾಣಿಕರು ಸುರಕ್ಷಿತ

ಹೌರಾ-ಸಿಕಂದರಾಬಾದ್ ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ: ಮೂರು ಬೋಗಿಗಳು ಸುಟ್ಟು  ಭಸ್ಮ; ಪ್ರಯಾಣಿಕರು ಸುರಕ್ಷಿತ
ಫಲಕ್ನುಮಾ ರೈಲಿನ ಬೋಗಿಗಳಿಗೆ ಬೆಂಕಿ
Published On :

ಹೈದರಾಬಾದ್: ಹೌರಾ-ಸಿಕಂದರಾಬಾದ್ ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ತೆಲಂಗಾಣದ ಯಾದಾದ್ರಿ ಭುವನಗಿರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹಾರಿದ್ದಾರೆ. ಹಾಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ರೈಲಿನ ಮೂರು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ

ಯಾದಾದ್ರಿ ಭುವನಗಿರಿ ಜಿಲ್ಲೆಯ ಪಗಿಡಿಪಲ್ಲಿ ಮತ್ತು ಬೊಮ್ಮಾಯಿಪಲ್ಲಿ ನಡುವೆ ಈ ಅಗ್ನಿ ಅವಘಡ ಸಂಭವಿಸಿತು. S4, S5, S6 ಎಂಬ ಮೂರು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದ ತಕ್ಷಣ ಸಿಬ್ಬಂದಿ ರೈಲು ನಿಲ್ಲಿಸಿ ಎರಡೂ ಬೋಗಿಗಳಿಂದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಯಾವುದೇ ಪ್ರಯಾಣಿಕರಿಗೂ ಪ್ರಾಣಹಾನಿಯಾಗಿಲ್ಲ . ಬೆಂಕಿ ಅನಾಹುತ ಸಂಭವಿಸಿದ ತಕ್ಷಣವೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಇತರ ಬೋಗಿಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲು ಅಧಿಕಾರಿಗಳು ಬೋಗಿಗಳನ್ನು ಬೇರ್ಪಡಿಸಿದ್ದಾರೆ. ಪ್ರತ್ಯೇಕ ಸ್ಥಳದಲ್ಲಿ ಘಟನೆ ನಡೆದಿದ್ದರಿಂದ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸುವುದು ಕಷ್ಟಕರವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.