ಬಹುಕೋಟಿ ಜಿಎಸ್‌ಟಿ ಹಗರಣ: ಮತ್ತೆ ಮೂವರ ಬಂಧನ, ಬಂಧಿತರ ಸಂಖ್ಯೆ 19ಕ್ಕೆ ಏರಿಕೆ
ಸರ್ಕಾರಕ್ಕೆ ಆದಾಯ ನಷ್ಟ ಉಂಟು ಮಾಡಿದ ಬಹುಕೋಟಿ ಜಿಎಸ್‌ಟಿ ಹಗರಣಕ್ಕೆ ಸಂಬಂಧಿಸಿದಂತೆ ನೋಯ್ಡಾ ಪೊಲೀಸರು ಸೋಮವಾರ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ...

ನೋಯ್ಡಾ: ಸರ್ಕಾರಕ್ಕೆ ಆದಾಯ ನಷ್ಟ ಉಂಟು ಮಾಡಿದ ಬಹುಕೋಟಿ ಜಿಎಸ್‌ಟಿ ಹಗರಣಕ್ಕೆ ಸಂಬಂಧಿಸಿದಂತೆ ನೋಯ್ಡಾ ಪೊಲೀಸರು ಸೋಮವಾರ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಗರಣವು ನಕಲಿ ಆಧಾರ್ ಕಾರ್ಡ್‌ಗಳ ಆಧಾರದ ಮೇಲೆ ಸಾವಿರಾರು ಬೋಗಸ್ ಕಂಪನಿಗಳನ್ನು ಸೃಷ್ಟಿಸಿ, ಅದರಿಂದ ನಕಲಿ ಇನ್‌ವಾಯ್ಸ್‌ಗಳನ್ನು ಸಿದ್ಧಪಡಿಸಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್(ಐಟಿಸಿ) ಕ್ಲೈಮ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಜೂನ್ ನಲ್ಲಿ ಜಿಎಸ್ ಟಿ ಸಂಗ್ರಹ ಶೇ.12 ರಷ್ಟು ಏರಿಕೆ!
ಇಲ್ಲಿನ ಸೆಕ್ಟರ್ 20 ಪೊಲೀಸ್ ಠಾಣೆಯು ಜಿಎಸ್‌ಟಿ ವಂಚನೆ ಕುರಿತು ತನಿಖೆ ನಡೆಸುತ್ತಿದೆ. ಪೊಲೀಸರು ಈ ಪ್ರಕರಣದಲ್ಲಿ ಬೇಕಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮಿತ್ ಅಲಿಯಾಸ್ ಮಾಂಟಿ (42), ಅಜಯ್ ಅಲಿಯಾಸ್ ಮಿಂಟು(41) ಮತ್ತು ಮಹೇಶ್ ಎಂದು ಗುರುತಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ(ನೋಯ್ಡಾ) ಶಕ್ತಿ ಮೋಹನ್ ಅವಸ್ತಿ ಅವರು ಹೇಳಿದ್ದಾರೆ.
ಈ ಮೂವರು ಆರೋಪಿಗಳು ಹರಿಯಾಣದ ಸಿರ್ಸಾದಲ್ಲಿ ವಾಸವಾಗಿದ್ದು, ಕಳೆದ ಐದು ವರ್ಷಗಳಿಂದ ವಂಚಕರ ಗ್ಯಾಂಗ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಆರೋಪಿಗಳು ನಕಲಿ ಜಿಎಸ್‌ಟಿ ಬಿಲ್‌ಗಳಿಂದ ಪಡೆದ ಹಣವನ್ನು ಸಂಗ್ರಹಿಸುವುದು ಮತ್ತು ಅದನ್ನು ವರ್ಗಾವಣೆ ಮಾಡುತ್ತಿದ್ದರು. ಅವರು ಸಂಪೂರ್ಣ ಎನ್‌ಸಿಆರ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ವಹಿವಾಟು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು ನೋಯ್ಡಾ ಪೊಲೀಸರು ಈ 'ಜಿಎಸ್‌ಟಿ ಹಗರಣ'ವನ್ನು ಭೇದಿಸಿದ್ದರು, ಇದರಲ್ಲಿ ಸುಮಾರು 3,077 ನಕಲಿ ಕಂಪನಿಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಈ ನಕಲಿ ಸಂಸ್ಥೆಗಳಿಂದ ಸುಮಾರು 8,500 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ಪ್ರಾಥಮಿಕತನಿಖೆಯಿಂದ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


