ದೆಹಲಿ-ಮೀರತ್ ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ: ಶಾಲಾ ಬಸ್-ಕಾರು ನಡುವೆ ಡಿಕ್ಕಿ, 6 ಮಂದಿ ಸಾವು
ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ನವದೆಹಲಿ: ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಶಾಲಾ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಮಂದಿ ಕಾರಿನಲ್ಲಿದ್ದು, ಕಾರು ಗುರ್ಗಾಂವ್ಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.
ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದನು. ಕಾರು ಮೀರತ್ನಿಂದ ಗುರ್ಗಾಂವ್ಗೆ ಹೋಗುತ್ತಿತ್ತು. ಚಾಲಕ ದೆಹಲಿಯಿಂದ ದಾರಿ ತಪ್ಪಿದ ದಿಕ್ಕಿನಿಂದ ಬರುತ್ತಿದ್ದರು. ಇದರ ಪರಿಣಾಮದಿಂದ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದವರು ಒಂದೇ ಕುಟುಂಬದ ಸದಸ್ಯರು. ಬಸ್ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಂತಾಪ ಸೂಚಿಸಿದ್ದಾರೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


