ಭಯೋತ್ಪಾದನೆಗೆ ಸಂಚು ಪ್ರಕರಣ: ದಕ್ಷಿಣ ಕಾಶ್ಮೀರದ 5 ಸ್ಥಳಗಳಲ್ಲಿ ಎನ್ಐಎ ದಾಳಿ
ಭಯೋತ್ಪಾದಕ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ದಕ್ಷಿಣ ಕಾಶ್ಮೀರದ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.

ನವದೆಹಲಿ: ಭಯೋತ್ಪಾದಕ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ದಕ್ಷಿಣ ಕಾಶ್ಮೀರದ ಐದು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ಗಳು, ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ) ಮತ್ತು ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಲು ಸಂಚು ರೂಪಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಎನ್ಐಎ ಪ್ರಕರಣದ ತನಿಖೆ ನಡೆಸಲು ಆರಂಭಿಸಿದೆ. ಪ್ರಕರಣ ಸಂಬಂಧ ಮೇ ತಿಂಗಳಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್, ಶೋಪಿಯಾನ್, ಪುಲ್ವಾಮಾ, ಶ್ರೀನಗರ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ 13 ಸ್ಥಳಗಳನ್ನು ಎನ್ಐಎ ಶೋಧಿಸಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡಲು ಸ್ಥಳೀಯ ಯುವಕರು ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈಜೋಡಿಸಿದ್ದು, ಸಂಚು ರೂಪಿಸುತ್ತಿವೆ ಎಂದು ಎನ್ಐಎ ಹೇಳಿತ್ತು.
ಇದಕ್ಕೂ ಮುನ್ನ, ಜೂನ್ 26 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಳೆದ ವರ್ಷ ಏಜೆನ್ಸಿ ದಾಖಲಿಸಿದ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


