ದೇಶ

ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್‌ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್‌ಸ್ಟರ್ ಗೆ ತೀವ್ರ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಗ್ಯಾಂಗ್ ಸ್ಚರ್ ಲಾರೆನ್ಸ್ ಬಿಷ್ಣೋಯಿ
Published On :

ರಾಯ್ಪುರ: ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿಯಾಗಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದು ಆತನನ್ನು ತಡರಾತ್ರಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಅವರ ಆರೋಗ್ಯ ಹದಗೆಟ್ಟ ನಂತರ ಬಿಷ್ಣೋಯ್ ನನ್ನು ಬಟಿಂಡಾ ಸೆಂಟ್ರಲ್ ಜೈಲಿನಿಂದ ಫರೀದ್ಕೋಟ್ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ತಿಳಿದುಬಂದಿದೆ. ಪೋಲೀಸರ ಮಾಹಿತಿಯ ಪ್ರಕಾರ, ಕಳೆದ ಕೆಲವು ದಿನಗಳಿಂದ ಬಿಷ್ಣೋಯಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಜ್ವರ ತೀವ್ರವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಏತನ್ಮಧ್ಯೆ, ಲಾರೆನ್ಸ್ ಬಿಷ್ಣೋಯ್ ಸಿಂಡಿಕೇಟ್‌ ಅಥವಾ ಗ್ಯಾಂಗ್ ನ ಮೂವರು ಭೀಕರ ಶಾರ್ಪ್‌ಶೂಟರ್‌ಗಳನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂದು ದೆಹಲಿ ಪೊಲೀಸರ ವಿಶೇಷ ಘಟಕ ತಿಳಿಸಿದೆ. ಬಂಧಿತ ಆರೋಪಿಗಳನ್ನು ಉದಿತ್ ಶಾ (31), ಅನೀಶ್ ಕುಮಾರ್ (42), ಮತ್ತು ಮೋಹಿತ್ ಗುಪ್ತಾ (27) ಎಂದು ಗುರುತಿಸಲಾಗಿದೆ. ಅಂತೆಯೇ ಬಂಧಿತರಿಂದ ಎರಡು ಸಿಂಗಲ್-ಶಾಟ್ ಪಿಸ್ತೂಲ್ ಮತ್ತು ನಾಲ್ಕು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಶೇಷ ಸೆಲ್ ತಿಳಿಸಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.