ದೇಶ

ಕಸೋಲ್‌ನಲ್ಲಿ ಸಿಲುಕಿದ್ದ 2,000 ಪ್ರವಾಸಿಗರನ್ನು ರಕ್ಷಿಸಲಾಗಿದೆ: ಹಿಮಾಚಲ ಸಿಎಂ ಸುಖು

ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...

ಕಸೋಲ್‌ನಲ್ಲಿ ಸಿಲುಕಿದ್ದ 2,000 ಪ್ರವಾಸಿಗರನ್ನು ರಕ್ಷಿಸಲಾಗಿದೆ: ಹಿಮಾಚಲ ಸಿಎಂ ಸುಖು
ಹಿಮಾಚಲದಲ್ಲಿ ಪ್ರವಾಹ
Published On :

ಶಿಮ್ಲಾ/ಕುಲು: ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಬುಧವಾರ ತಿಳಿಸಿದ್ದಾರೆ.

ಲಾಹೌಲ್‌ನಲ್ಲಿ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಆಯಾ ಸ್ಥಳಗಳಿಗೆ ತೆರಳಿವೆ ಎಂದು ಹಿಮಾಚಲ ಸಿಎಂ ಹೇಳಿದ್ದಾರೆ.

ಮಂಗಳವಾರ ಸಂಜೆ ಕುಲು-ಮನಾಲಿ ರಸ್ತೆ ತೆರೆಯಲಾಗಿದ್ದು, ಸುಮಾರು 2,200 ವಾಹನಗಳು ಕುಲು ದಾಟಿವೆ.

ಕಳೆದ ಎರಡು ದಿನಗಳಿಂದ ಮನಾಲಿ ಮತ್ತು ಅದರ ಉಪನಗರಗಳಲ್ಲಿ ಹಲವಾರು ಪ್ರದೇಶಗಳಲ್ಲಿ ಮೊಬೈಲ್ ಸಿಗ್ನಲ್ ಇರಲಿಲ್ಲ ಮತ್ತು ಪ್ರವಾಸಿಗರು ತಮ್ಮ ಕುಟುಂಬಗಳನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಕಸೋಲ್‌ನಲ್ಲಿ ಸಿಲುಕಿದ್ದ 2,000 ಕ್ಕೂ ಹೆಚ್ಚು ಪ್ರವಾಸಿಗರನ್ನು ಸದ್ಯಕ್ಕೆ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ. ಕಸೋಲ್-ಭುಂಟರ್ ರಸ್ತೆಯಲ್ಲಿನ ಡುಂಖಾರಾ ಭೂಕುಸಿತವನ್ನು ತೆರವುಗೊಳಿಸಲು ನಮ್ಮ ತಂಡಗಳು ಅವಿರತವಾಗಿ ಶ್ರಮಿಸುತ್ತಿವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.