ದೇಶ

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ: 22 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

25 ಜನರ ಸಜೀವ ದಹನಕ್ಕೆ ಸಾಕ್ಷಿಯಾಗಿದ್ದ ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, 22 ಜನರಿಗೆ ಗಾಯವಾಗಿದ್ದು ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ: 22 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
Published On :

ಪುಣೆ: 25 ಜನರ ಸಜೀವ ದಹನಕ್ಕೆ ಸಾಕ್ಷಿಯಾಗಿದ್ದ ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, 22 ಜನರಿಗೆ ಗಾಯವಾಗಿದ್ದು ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಮುಂಜಾನೆ ಖಾಸಗಿ ಐಷಾರಾಮಿ ಬಸ್ ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸೇರಿದಂತೆ ಕನಿಷ್ಠ 22 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಔರಾಂಗಾಬಾದ್ ಜಿಲ್ಲೆಯ ಫುಲಂಬ್ರಿ ಬಳಿ ಮುಂಬೈ-ನಾಗ್ಪುರ ಹೈಸ್ಪೀಡ್ ಕ್ಯಾರೇಜ್‌ವೇಯಲ್ಲಿ ಮುಂಜಾನೆ 2.30 ರ ಸುಮಾರಿಗೆ ಈ ಘಟನೆ ನಡೆದಿದೆ. ಖಾಸಗಿ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿದ್ದರೆ, ಸ್ಟೀಲ್ ಅನ್ನು ಹೊತ್ತ ಟ್ರೈಲರ್ ಟ್ರಕ್ ಜಲ್ನಾದಿಂದ ಸೂರತ್‌ಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಟ್ರೇಲರ್ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಕನಿಷ್ಠ 22 ಪ್ರಯಾಣಿಕರು ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು.

ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಔರಂಗಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು.

ಇದೇ ಎಕ್ಸ್ ಪ್ರೇಸ್ ವೇ ನಲ್ಲಿ ಪೂರ್ವ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅವರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಪ್ರಯಾಣಿಕರು ಸುಟ್ಟು ಕರಕಲಾಗಿದ್ದರು. ಇದಾದ ಕೆಲವು ದಿನಗಳ ಅಂತರದಲ್ಲಿ ಈ ಅಪಘಾತ ಸಂಭವಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.