ಕೇಳದೆ ಸಾಂಬಾರಿಗೆ ಟೊಮೆಟೊ ಹಾಕಿದ್ದಕ್ಕೆ ಸಿಟ್ಟು, ಮಗುವಿನ ಜೊತೆ ಮನೆ ಬಿಟ್ಟ ಪತ್ನಿ
ತನ್ನನ್ನು ಕೇಳದೇ ಸಾಂಬಾರಿಗೆ ಟೊಮೆಟೊ ಹಾಕಿದ್ದಕ್ಕೇ ಕೋಪಗೊಂಡ ಪತ್ನಿಯೊಬ್ಬರು ತಮ್ಮ ಪತಿಯನ್ನು ತೊರೆದು ಮಗುವಿನೊಂದಿಗೆ ಮನೆ ಬಿಟ್ಟು ಹೋದ ಘಟನೆ ನಡೆದಿದೆ.

ಭೋಪಾಲ್: ತನ್ನನ್ನು ಕೇಳದೇ ಸಾಂಬಾರಿಗೆ ಟೊಮೆಟೊ ಹಾಕಿದ್ದಕ್ಕೇ ಕೋಪಗೊಂಡ ಪತ್ನಿಯೊಬ್ಬರು ತಮ್ಮ ಪತಿಯನ್ನು ತೊರೆದು ಮಗುವಿನೊಂದಿಗೆ ಮನೆ ಬಿಟ್ಟು ಹೋದ ಘಟನೆ ನಡೆದಿದೆ.
ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಈ ನಡೆದಿದ್ದು ಸದ್ಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಇರುವ ಟೊಮೆಟೊವನ್ನು ತನ್ನನ್ನು ಕೇಳದೇ ಸಾಂಬಾರಿನಲ್ಲಿ ಬಳಸಿದಕ್ಕೆ ಗಂಡನ ಜೊತೆ ಜಗಳವಾಡಿದ ಹೆಂಡತಿ ಕೊನೆಗೆ ಮನೆಯನ್ನೇ ತೊರೆದು ಕಾಣೆಯಾಗಿರುವ ಘಟನೆ ನಡೆದಿದೆ.
ಮೂಲಗಳ ಪ್ರಕಾರ ಸಂಜೀವ್ ಬರ್ಮನ್ ದಂಪತಿ ಶಾಹದೋಲ್‌ನಲ್ಲಿ ಸಣ್ಣ ಹೋಟೆಲ್‌ವೊಂದನ್ನು ನಡೆಸುತ್ತಿದ್ದಾರೆ. ಟೊಮೆಟೊ ತರಕಾರಿಗಳ ಬೆಲೆ ಏರಿಕೆಯಿಂದ ಪರಿಸ್ಥಿತಿಗೆ ತಕ್ಕಂತೆ ಖಾದ್ಯಗಳನ್ನು ತಯಾರಿಸುತ್ತಿದ್ದರು. ಆದರೆ ಸಂಜೀವ್ ಬರ್ಮನ್ ಇತ್ತೀಚೆಗೆ ಅಡುಗೆ ಮಾಡುವಾಗ ಹೆಂಡತಿಯನ್ನು ಕೇಳದೇ ಎರಡೇ ಎರಡು ಟೊಮೆಟೊ ಹಣ್ಣುಗಳನ್ನು ಬಳಸಿದ್ದಾರೆ. ಇಷ್ಟಕ್ಕೇ ಸಿಟ್ಟಾದ ಪತ್ನಿ ಪತಿಯೊಂದಿಗೆ ಜಗಳ ತೆಗೆದಿದ್ದಾರೆ.
ಸಂಜೀವ್ ಹೇಳದೇ ಕೇಳದೆ ಎರಡು ಟೊಮೆಟೊ ಹಣ್ಣುಗಳನ್ನು ಬಳಸಿ ಸಾಂಬಾರು ತಯಾರಿಸಿದ್ದನ್ನು ಕಂಡು ಕೋಪಗೊಂಡ ಪತ್ನಿ ಜಗಳ ಆರಂಭಿಸಿದ್ದಾಳೆ. ಟೊಮೆಟೊದಿಂದ ಆರಂಭವಾದ ಸಣ್ಣ ಜಗಳ ಅತಿರೇಕಕ್ಕೆ ಹೋಗಿದ್ದು, ಕೊನೆಗೆ ಸಂಜೀವ್ ಬರ್ಮನ್ ಪತ್ನಿ, ಮಗುವಿನ ಜೊತೆ ಮನೆ ಬಿಟ್ಟು ಹೋಗಿದ್ದಾಳೆ. ಈ ಸಣ್ಣ ವಿಚಾರಕ್ಕೆ ಮನೆ ಬಿಟ್ಟು ಹೋದ ಪತ್ನಿಯನ್ನು ಸಂಜೀವ್ ಬರ್ಮನ್ ಹುಡುಕಿದ್ದಾರೆ. ಆದರೆ ಆಕೆ ಎಲ್ಲಿಯೂ ಪತ್ತೆಯಾಗದ ಕಾರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಸಂಜೀವ್ ಬರ್ಮನ್ ಹೆಂಡತಿ ನಾಪತ್ತೆಯ ಬಗ್ಗೆ ದೂರು ದಾಖಲಿಸಿರುವುದನ್ನು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದು, ಟೊಮೆಟೊಗಾಗಿ ಜಗಳ ಆರಂಭವಾಗಿದೆ ಎನ್ನುವುದನ್ನು ಸಹ ತಿಳಿಸಿದ್ದಾರೆ. ಸಂಜೀವ್ ಬರ್ಮನ್ ಅವರು ಅಡುಗೆ ಮಾಡುತ್ತಿದ್ದಾಗ ತರಕಾರಿ ಸಾಂಬಾರಿಗೆ ಎರಡು ಟೊಮೆಟೊ ಹಾಕಿದ್ದರಿಂದ ಜಗಳ ಆರಂಭವಾಗಿದ್ದು, ಅನುಮತಿ ಕೇಳಲಿಲ್ಲ ಎಂದು ಪತ್ನಿ ಮೂರು ದಿನದಿಂದ ಮಾತನಾಡಿಲ್ಲ, ಬಳಿಕ ಮಗುವಿನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ಸಂಜೀವ್ ಬರ್ಮನ್ ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


