ದೇಶ

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ

ಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ಕಾರಣ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ
Published On :

ಅಹಮದಾಬಾದ್: 2014ರಲ್ಲಿ ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸದೆ ಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಕಾರಣರಾದ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮೆಹ್ಸಾನಾ ನ್ಯಾಯಾಲಯವು ಗುರುವಾರ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಮೆಹ್ಸಾನಾದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಆರ್ ಅಗರವಾಲ್ ಅವರು ಚೌಧರಿ ಮತ್ತು ಇತರ 14 ಮಂದಿ ಐಪಿಸಿ ಸೆಕ್ಷನ್ 420 ರ ಅಡಿಯಲ್ಲಿ ವಂಚನೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದರು.

ಪಬ್ಲಿಕ್ ಪ್ರಾಸಿಕ್ಯೂಟರ್ ವಿಜಯ್ ಬರೋಟ್ ಮಾಧ್ಯಮಗಳೊಂದಿಗೆ ಮಾತನಾಡಿ, 'ಡೈರಿ ವಂಚನೆಗೆ ಸಂಬಂಧಿಸಿದಂತೆ 2014 ರಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 22 ಪ್ರತಿವಾದಿಗಳಿದ್ದರು ಮತ್ತು ಅವರಲ್ಲಿ ಮೂವರು ವಿಚಾರಣೆಯ ಸಮಯದಲ್ಲಿ ಸತ್ತರು. 1996 ರಲ್ಲಿ, ಗುಜರಾತಿನ ಸಹಕಾರಿ ಕ್ಷೇತ್ರದ ಪ್ರಮುಖ ವ್ಯಕ್ತಿಯಾಗಿದ್ದ ಚೌಧರಿ ಅವರು, ಶಂಕರ ಸಿನ್ಹ ವಘೇಲಾ ಸಂಪುಟದಲ್ಲಿ ಗೃಹ ಖಾತೆಯ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.