ಜುಲೈ 18 ರಂದು ಅಜಿತ್ ಪವಾರ್ ರಿಂದ ಪ್ರಧಾನಿ ಮೋದಿ ಭೇಟಿ
ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದು, ಈ ವೇಳೆ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶನಿವಾರ...

ನಾಸಿಕ್: ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದು, ಈ ವೇಳೆ ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶನಿವಾರ ಹೇಳಿದ್ದಾರೆ.
ಪ್ರಮುಖ ಹಣಕಾಸು ಮತ್ತು ಯೋಜನಾ ಖಾತೆಯನ್ನು ಪಡೆದುಕೊಂಡಿರುವ ಶರದ್ ಪವಾರ್ ಅವರು, ಜುಲೈ 2 ರಂದು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ ನಾನು ಮತ್ತು ಇತರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ)ದ ಸಚಿವರು ಖಾತೆಗಳ ಹಂಚಿಕೆಯಿಂದ ಸಂತೋಷವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇಂದು ಮಾಧ್ಯಮ ಸಂವಾದದ ವೇಳೆ ಮಾತನಾಡಿದ ಪವಾರ್, "ನಾನು ಜುಲೈ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತೇನೆ. ಸಭೆಯಲ್ಲಿ, ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಅವರೊಂದಿಗೆ ಚರ್ಚಿಸುತ್ತೇನೆ. (ಎನ್ಸಿಪಿ ನಾಯಕ) ಪ್ರಫುಲ್ ಪಟೇಲ್ ಮತ್ತು ನಾನು ಎನ್ಡಿಎ ಸಭೆಯಲ್ಲಿ ಭಾಗವಹಿಸುತ್ತೇವೆ" ಎಂದು ಹೇಳಿದ್ದಾರೆ.
ಮಹಾ ಸಿಎಂ ಶಿಂಧೆ ಬಣ ಹಣಕಾಸು ಖಾತೆಯನ್ನು ಬಿಟ್ಟುಕೊಡಲು ಸಿದ್ಧರಿಲ್ಲದ ಕಾರಣ, ಸಿಎಂ ಸ್ಥಾನವನ್ನು ಬಿಟ್ಟುಕೊಡಲು ಸೂಚಿಸಲಾಗಿದೆ ಎಂದು ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಎನ್ಸಿಪಿ ನಾಯಕ, "ನನಗೆ ಗೊತ್ತಿಲ್ಲ ಅನವಶ್ಯಕವಾಗಿ ವಾತಾವರಣವನ್ನು ಕೆಡಿಸುವ ಪ್ರಯತ್ನ ಇದಾಗಿದೆ. ಪೋರ್ಟ್ಫೋಲಿಯೋ ಹಂಚಿಕೆಯಿಂದ ನಮಗೆ ಸಂತೋಷವಾಗಿದೆ" ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


