ದೇಶ

ಮಧ್ಯಪ್ರದೇಶದಲ್ಲಿ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ: ಜಲ ಫಿರಂಗಿ ಬಳಸಿ ಕೈ ಕಾರ್ಯಕರ್ತರನ್ನು ಚದುರಿಸಿದ ಪೊಲೀಸ್

ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಮಧ್ಯಪ್ರದೇಶದಲ್ಲಿ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ: ಜಲ ಫಿರಂಗಿ ಬಳಸಿ ಕೈ ಕಾರ್ಯಕರ್ತರನ್ನು ಚದುರಿಸಿದ ಪೊಲೀಸ್
ಪ್ರತಿಭಟನಾ ನಿರತರನ್ನು ಚದುರಿಸಲು ಜಲ ಫಿರಂಗಿ ಬಳಕೆ
Published On :

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. 

ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸ್ ಅಧಿಕಾರಿಗಳು ಜಲ ಫಿರಂಗಿ ಪ್ರಯೋಗಿಸಿದ ಪರಿಣಾಮ, ಕಾಂಗ್ರೆಸ್ ನ ಹಲವು ಕಾರ್ಯಕರ್ತರು ಹಾಗೂ ನಾಯಕರು ಗಾಯಗೊಂಡಿದ್ದಾರೆ.

ಭೋಪಾಲ್ ನ ನೂತನ ಜಿಲ್ಲಾ ಅಧ್ಯಕ್ಷ ಮೋನು ಸಕ್ಸೇನಾ, ಮಹಿಳಾ ಕಾರ್ಯಕರ್ತೆ ಮಹಾಕ್ ರಾಣ ತೀವ್ರವಾಗಿ ಗಾಯಗೊಂಡಿರುವ ಕಾಂಗ್ರೆಸ್ ನಾಯಕರಾಗಿದ್ದಾರೆ.

ಸುಮಾರು 200 ಕ್ಕೂ ಹೆಚ್ಚು ಕಾಂಗ್ರೆಸ್ ನ ಕಾರ್ಯಕರ್ತರು ಹಗರಣವನ್ನು ವಿರೋಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ಕೈಗೊಂಡಿದ್ದರು. ಈ ವೇಳೆ ಬಂಗಾಂಗ ಕ್ರಾಸಿಂಗ್ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ದಾಟಿ ಮುಂದೆ ಹೋಗಲು ಪ್ರತಿಭಟನಾ ನಿರತರು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ದಾಟಿ, ಅದರ ಮೇಲೇರಿದ ಹಿನ್ನೆಲೆಯಲ್ಲಿ ಪೊಲೀಸರು ಜಲ ಫಿರಂಗಿಯನ್ನು ಪ್ರಯೋಗಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.