ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವು!
ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಗ್ವಾಲಿಯರ್: ಶಿಕ್ಷಕರಿಂದ ಥಳಿತಕ್ಕೆ ಒಳಗಾದ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಥಳಿತಕ್ಕೆ ಒಳಗಾದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹೋಮ್ ವರ್ಕ್ ನ್ನು ಪೂರ್ಣಗೊಳಿಸದ ಕಾರಣ ಶಿಕ್ಷಕ ವಿದ್ಯಾರ್ಥಿಯನ್ನು ಥಳಿಸಿದ್ದರು. ಶಿಕ್ಷಕನ ಥಳಿತದಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
8 ನೇ ತರಗಿಯಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಲಾದ ಸಾವಿಗೆ ಕಾರಣವನ್ನು ಆಧರಿಸಿ ಮುಂದಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


