ಎನ್‌ಡಿಎ ಸಭೆಯಲ್ಲಿ ಅಜಿತ್ ಪವಾರ್ ಬಣ ಭಾಗವಹಿಸಲಿದೆ: ಪ್ರಫುಲ್ ಪಟೇಲ್
ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಬಣ ಮತ್ತು ಅದರ 15 ಶಾಸಕರು ಸೋಮವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ಪಕ್ಷ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ.

ನವದೆಹಲಿ: ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಬಣ ಮತ್ತು ಅದರ 15 ಶಾಸಕರು ಸೋಮವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ಪಕ್ಷ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ.
ಈ ಮಧ್ಯೆ ಮಂಗಳವಾರ ದೆಹಲಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಸಭೆಯಲ್ಲಿ ಅಜಿತ್ ಪವಾರ್ ಮತ್ತು ಅವರ ಬಣ ಭಾಗವಹಿಸಲಿದೆ ಎಂದು ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರು ತಿಳಿಸಿದ್ದಾರೆ.
"ಶರದ್ ಪವಾರ್ ಅವರೊಂದಿಗಿನ ಇಂದಿನ ಸಭೆಯಲ್ಲಿ, ಎನ್‌ಸಿಪಿ ಒಗ್ಗಟ್ಟಿನಿಂದ ಇರುವುದನ್ನು ಖಚಿತಪಡಿಸಿಕೊಳ್ಳಲು ನಾವು ಮತ್ತೆ ಅವರನ್ನು ಕೇಳಿಕೊಂಡಿದ್ದೇವೆ" ಎಂದು ಪಟೇಲ್ ಹೇಳಿದ್ದಾರೆ.
ಭಾನುವಾರ ನಡೆದ ಸಭೆಯಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗದ ಶಾಸಕರು (ಅಜಿತ್ ಪವಾರ್ ಬಣದ) ಇಂದು ಹಾಜರಿದ್ದರು ಎಂದು ಪಟೇಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


