ಎನ್ಡಿಎ ಸೇರಲು ಆರು ಲೋಕಸಭಾ ಸ್ಥಾನ, ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯಿಟ್ಟ ಚಿರಾಗ್ ಪಾಸ್ವಾನ್
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್ಜೆಪಿ(ರಾಮ್ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರಿಗೆ ಎನ್ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು...

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್ಜೆಪಿ(ರಾಮ್ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರಿಗೆ ಎನ್ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳಬೇಕು ಎಂದು ಚಿರಾಗ್ ಒತ್ತಾಯಿಸಿದ್ದಾರೆ.
ಎಲ್ಜೆಪಿ(ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಅವರು ತಮ್ಮ ಪಕ್ಷಕ್ಕೆ ಹಾಜಿಪುರ ಸೇರಿದಂತೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿರುವುದಾಗಿ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಚಿರಾಗ್ ಅವರನ್ನು ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ಯತ್ನಿಸುತ್ತಿದ್ದು, ಎಲ್ಜೆಪಿ (ರಾಮ್ ವಿಲಾಸ್) ಎನ್ ಡಿಎನ ಪ್ರಮುಖ ಮಿತ್ರ ಪಕ್ಷ ಎಂದು ಜೆಪಿ ನಡ್ಡಾ ಅವರು ಬಣ್ಣಿಸಿದ್ದಾರೆ. ಅಲ್ಲದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಎಲ್ಜೆಪಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.
ಚಿರಾಗ್ ಈಗಾಗಲೇ ಬಿಜೆಪಿ ನಾಯಕರ ಮುಂದೆ ತಮ್ಮ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.
ಚಿರಾಗ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುವುದು ಎಂಬ ಊಹಾಪೋಹಗಳಿವೆ. ಆದರೆ ಈ ಬಗ್ಗೆ ಚಿರಾಗ್ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಮಯ ತೆಗೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ರೈ ಅವರು ಶುಕ್ರವಾರ ಸಂಜೆ ಚಿರಾಗ್ ಅವರನ್ನು ಎರಡನೇ ಬಾರಿ ಭೇಟಿಯಾಗಿ ಕೇಂದ್ರದ ಎನ್ಡಿಎ ಸರ್ಕಾರಕ್ಕೆ ಸೇರುವಂತೆ ಆಹ್ವಾನಿಸಿದ್ದರು.
ಜುಲೈ 18 ರಂದು ನವದೆಹಲಿಯಲ್ಲಿ ಎನ್ಡಿಎ ಸಭೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


