ದೇಶ

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಣಿತಶಾಸ್ತ್ರಜ್ಞೆ ಮತ್ತು ವಿಜ್ಞಾನಿ, ಡಾ.ಜಯಂತ್ ನಾರ್ಲಿಕರ್ ಅವರ ಪತ್ನಿ ಡಾ.ಮಂಗಳಾ ನಾರ್ಲಿಕರ್ ಸೋಮವಾರ ಮಹಾರಾಷ್ಟ್ರದ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ
ಡಾ. ಮಂಗಳಾ ನಾರ್ಲಿಕರ್
Published On :

ಪುಣೆ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಣಿತಶಾಸ್ತ್ರಜ್ಞೆ ಮತ್ತು ವಿಜ್ಞಾನಿ, ಡಾ.ಜಯಂತ್ ನಾರ್ಲಿಕರ್ ಅವರ ಪತ್ನಿ ಡಾ.ಮಂಗಳಾ ನಾರ್ಲಿಕರ್ ಸೋಮವಾರ ಮಹಾರಾಷ್ಟ್ರದ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

 ಮಂಗಳಾ ನಾರ್ಲಿಕರ್ ಅವರು ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲದಿಂದಲೂ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಅವರು ಪತಿ, ಮೂವರು ಪುತ್ರಿಯರು ಹಾಗೂ ಐವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ತನ್ನ ಪತಿಯೊಂದಿಗೆ ಇಂಗ್ಲೆಂಡ್‌ನ ಕೇಂಬ್ರಿಡ್ಜ್‌ನಿಂದ ಭಾರತಕ್ಕೆ ಮರಳಿದ ನಂತರ  ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಡಾ. ಮಂಗಳಾ ನಾರ್ಲಿಕರ್  ಬಾಂಬೆ ವಿಶ್ವವಿದ್ಯಾಲಯದಲ್ಲಿ ಗಣಿತವನ್ನು ಸಹ ಬೋಧಿಸಿದ್ದರು.

 1989 ರಲ್ಲಿ ದಂಪತಿ ಪುಣೆಗೆ ತೆರಳಿದ್ದರು. ಅಲ್ಲಿ ಡಾ. ಮಂಗಳಾ ನಾರ್ಲಿಕರ್ ಅವರು ಪುಣೆ ವಿಶ್ವವಿದ್ಯಾಲಯದ (ಈಗ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ) ಗಣಿತ ವಿಭಾಗದಲ್ಲಿ ಕೆಲಸ ಮಾಡಿದರು. ಆಕೆಯ ಪಾರ್ಥೀವ ಶರೀರವನ್ನು ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು, ನಂತರ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.