2024 'ಲೋಕ' ಸಮರಕ್ಕೆ ತಯಾರಿ: ಬೆಂಗಳೂರಿನಲ್ಲಿ ವಿಪಕ್ಷಗಳ ಡಿನ್ನರ್ ಸಭೆ
ಬೆಂಗಳೂರಿನಲ್ಲಿ ಪ್ರತಿಪಕ್ಷಗಳ 2ನೇ ಸಭೆಗೆ ಚಾಲನೆ ದೊರೆತಿದ್ದು, ಡಿನ್ನರ್ ಸಭೆ ನಡೆದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಪಕ್ಷಗಳ 2ನೇ ಸಭೆಗೆ ಚಾಲನೆ ದೊರೆತಿದ್ದು, ಡಿನ್ನರ್ ಸಭೆ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಂಕೆ ಸ್ಟ್ಯಾಲಿನ್, ಅರವಿಂದ್ ಕೇಜ್ರಿವಾಲ್, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಮಮತಾ ಬ್ಯಾನರ್ಜಿ ಹಾಗೂ ಇತರರು ಸಭೆಯಲ್ಲಿ ಭಾಗಿಯಾಗಿದ್ದರು.
ಸಭೆ ಆರಂಭವಾಗುವುದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಪಕ್ಷದ ನಾಯಕ ಬಿಹಾರ ಉಪಮುಖ್ಯಮಂತ್ರಿ ಸಿಎಂ ತೇಜಸ್ವಿ ಯಾದವ್ ಅವರನ್ನು ಸ್ವಾಗತಿಸಿದ್ದರು.
ಜೆಡಿಯು ನಾಯಕ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಸಹ ಈ ಸಭೆಯಲ್ಲಿ ಭಾಗಿಯಾಗಿದ್ದರು. 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಎನ್ ಡಿಎ ನ್ನು ಎದುರಿಸುವ ಉದ್ದೇಶ ಹೊಂದಿರುವ ಪ್ರತಿಪಕ್ಷಗಳ 2 ನೇ ಸಭೆ ಇದಾಗಿದೆ.
ತಾಜ್ ವೆಸ್ಟ್ ಎಂಡ್ ಹೊಟೆಲ್ ನಲ್ಲಿ ಈ ಸಭೆ ನಡೆದಿದ್ದು ನಾಳೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಭೆ 4 ಗಂಟೆಗೆ ಮುಕ್ತಾಯವಾಗಲಿದೆ. ಪ್ರತಿಪಕ್ಷಗಳ ಎರಡನೇ ಸಭೆಯಲ್ಲಿ ಕಾಂಗ್ರೆಸ್ ಗೆ 26 ಪಕ್ಷಗಳ ಬೆಂಬಲ ದೊರೆತಿದೆ. ಮೊದಲ ಸಭೆ ಕಳೆದ ತಿಂಗಳು ಪಾಟ್ನಾದಲ್ಲಿ ನಡೆದಿತ್ತು. ಈ ಸಭೆಯಲ್ಲಿ ಮೈತ್ರಿಕೂಟಕ್ಕೆ ಸಂಬಂಧಿಸಿದ ಹಲವು ಸಮಿತಿಗಳು ರಚನೆಯಾಗುವ ಸಾಧ್ಯತೆ ಇದ್ದು, ಹಲವು ತಂಡಗಳು ಉಪ ಸಮಿತಿಗಳೂ ರಚನೆಯಾಗುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


