ದೇಶ

ಉಗ್ರರ ಹುಟ್ಟಡಗಿಸಿದ ಸೇನೆ: ಪೂಂಚ್ ಎನ್ಕೌಂಟರ್ ನಲ್ಲಿ 4 ಭಯೋತ್ಪಾದಕರು ಹತ

ಜಮ್ಮು ಮತ್ತು ಕಾಶ್ಮೀರದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾರತೀಯ ಸೇನಾಪಡೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಉಗ್ರರ ಹುಟ್ಟಡಗಿಸಿದ ಸೇನೆ: ಪೂಂಚ್ ಎನ್ಕೌಂಟರ್ ನಲ್ಲಿ 4 ಭಯೋತ್ಪಾದಕರು ಹತ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಂಟಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾರತೀಯ ಸೇನಾಪಡೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತರ ಪಡೆಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಪೂಂಚ್‌ನ ಸಿಂಧರಾ ಪ್ರದೇಶದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

"ನಿನ್ನೆ ರಾತ್ರಿ 11.30 ರ ಸುಮಾರಿಗೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಶುರುವಾಗಿತ್ತು. ಬಳಿಕ ಉಗ್ರರ ಚಲನವಲನಗಳ ಗಮನಿಸಲು ಡ್ರೋಣ್ ಗಳನ್ನು ನಿಯೋಜಿಸಲಾಗಿತ್ತು. ಇದರಂತೆ ಇಂದು ಬೆಳಿಗ್ಗೆ ಸ್ಥಳದಲ್ಲಿ ಎನ್ಕೌಂಟರ್ ನಡೆಸಿ, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಯಿತು ಎಂದು ಹೇಳಿದ್ದಾರೆ.

 ಕಾರ್ಯಾಚರಣೆಯಲ್ಲಿ ಹತರಾದ ನಾಲ್ವರು ಉಗ್ರರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.