ದೇಶ

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ಪ್ರಕರಣ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಗೆ ಮಧ್ಯಂತರ ಜಾಮೀನು ಮಂಜೂರು

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ಪ್ರಕರಣ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಗೆ ಮಧ್ಯಂತರ ಜಾಮೀನು ಮಂಜೂರು
ಬ್ರಿಜ್ ಭೂಷಣ್ ಸಿಂಗ್
Published On :

ನವದೆಹಲಿ: ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಸಂಸ್ಥೆಯ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಪ್ರಕರಣದ ಮತ್ತೋರ್ವ ಆರೋಪಿ ವಿನೋದ್ ತೋಮರ್ ಗೆ ಇಂದು ಮದ್ಯಂತರ ಜಾಮೀನು ಮಂಜೂರು ಮಾಡಿದೆ. 

ಅಂತೆಯೇ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಜುಲೈ 20ಕ್ಕೆ ಮುಂದೂಡಿದೆ. ಮುಂದಿನ ವಿಚಾರಣೆಯ ದಿನಾಂಕದವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ ಎಂದು ತಿಳಿಸಿದೆ.

ಪೊಲೀಸರು ಸಲ್ಲಿಸಿದ್ದ ಜಾರ್ಜ್ ಶೀಟ್ ಹೊರತಾಗಿಯೂ ಬ್ರಿಜ್ ಭೂಷಣ್ ಗೆ ಜಾಮೀನು ದೊರೆತಿರುವುದು ಹಲವರ ಹುಬ್ಬೇರಿಸಿದೆ. ಚಾರ್ಜ್ ಶೀಟ್ ನಲ್ಲಿ ಹಲವು ಗಂಭೀರ ಆರೋಪಗಳಿದ್ದರೂ ಅವರನ್ನೇಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ್ದ ದೆಹಲಿ ಪೊಲೀಸರು, ಬ್ರಿಜ್ ಭೂಷಣ್ ಅವರು ನಿರ್ದೇಶನಗಳನ್ನು ಪಾಲಿಸಿದ್ದಾರೆ ಮತ್ತು ತನಿಖೆಗೆ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದರು.

ಕುಸ್ತಿಪಟುಗಳಿಂದ ಯಾವುದೇ ಪುರಾವೆ ಸಿಕ್ಕಿಲ್ಲ
ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ತೆರಳಿದ ನಂತರ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು, ಏಳು ವರ್ಷಗಳವರೆಗಿನ ಶಿಕ್ಷಾರ್ಹ ಅಪರಾಧಗಳ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಬಾರದು ಎಂದು ನ್ಯಾಯಾಲಯದ ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ. ಚಾರ್ಜ್‌ಶೀಟ್‌ನ ಪ್ರಕಾರ, ಕುಸ್ತಿ ಫೆಡರೇಷನ್‌ನ ಸಿಬ್ಬಂದಿಗಳು ಕುಸ್ತಿಪಟುಗಳ ಹೇಳಿಕೆಗಳನ್ನು ದೃಢೀಕರಿಸಲಿಲ್ಲ ಮತ್ತು ಪೊಲೀಸರು ಪದೇ ಪದೇ ವಿನಂತಿಸಿದರೂ ಬೆದರಿಕೆ ಕರೆಗಳ ಕುರಿತು ಕುಸ್ತಿಪಟುಗಳಿಂದ ಯಾವುದೇ ಪುರಾವೆಗಳನ್ನು ಒದಗಿಸಲಾಗಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಬ್ರಿಜ್ ಭೂಷಣ್ ರಕ್ಷಿಸಲು ತನಿಖಾ ಸಮಿತಿ ಹುನ್ನಾರ : ಕುಸ್ತಿ ಪಟುಗಳ ಆರೋಪ
ಭಾರತದ ದಿಗ್ಗಜ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಸರ್ಕಾರ ರಚಿಸಿದ ಆರು ಸದಸ್ಯರ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಆದರೆ ಅದನ್ನು ಸಾರ್ವಜನಿಕಗೊಳಿಸಲಾಗಿಲ್ಲ.ಇದರ ಬೆನ್ನಲ್ಲೇ ಕುಸ್ತಿಪಟುಗಳು ಇಂತಹ ಆರೋಪ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.