ವಂದೇ ಮಾತರಂ ವಿಚಾರ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀವ್ರ ಗದ್ದಲ, ಸದನ ಮುಂದೂಡಿಕೆ
ಸಮಾಜವಾದಿ ಪಕ್ಷದ ಶಾಸಕರೊಬ್ಬರು 'ವಂದೇ ಮಾತರಂ' ಘೋಷಣೆ ವಿಚಾರವಾಗಿ ತೆಗೆದ ಕ್ಯಾತೆ ವಿಚಾರ ಇದೀಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿದ್ದು, ಸದನವನ್ನು ನಾಳೆಗೆ ಮುಂದೂಡಲಾಗಿದೆ.

ಮುಂಬೈ: ಸಮಾಜವಾದಿ ಪಕ್ಷದ ಶಾಸಕರೊಬ್ಬರು 'ವಂದೇ ಮಾತರಂ' ಘೋಷಣೆ ವಿಚಾರವಾಗಿ ತೆಗೆದ ಕ್ಯಾತೆ ವಿಚಾರ ಇದೀಗ ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿದ್ದು, ಸದನವನ್ನು ನಾಳೆಗೆ ಮುಂದೂಡಲಾಗಿದೆ.
ಹೌದು..ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಅವರ `ವಂದೇ ಮಾತರಂ' ಘೋಷಣೆ ವಿಚಾರವಾಗಿ ಕ್ಯಾತೆ ತೆಗೆದಿದ್ದು ಇದರಿಂದ ರೊಚ್ಚಿಗೆದ್ದ ಬಿಜೆಪಿ ಶಾಸಕರು ವಾಗ್ದಾಳಿ ನಡೆಸಿದ್ದಾರೆ. ಬಳಿಕ ಪರಸ್ಪರ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಗದ್ದಲ ತೀವ್ರವಾದ ಹಿನ್ನಲೆಯಲ್ಲಿ ಮಹಾರಾಷ್ಟ್ರ ವಿಧಾನಸಭೆಯನ್ನು ಸ್ಪೀಕರ್ ಮುಂದೂಡಿದ್ದಾರೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ; ಬಿಎಸ್‌ಪಿ ಏಕಾಂಗಿ ಹೋರಾಟ, ಎನ್‌ಡಿಎ, INDIA ಒಕ್ಕೂಟಗಳು ದಲಿತ ವಿರೋಧಿ: ಮಾಯಾವತಿ
ಸಂಭಾಜಿನಗರ ಜಿಲ್ಲೆಯಲ್ಲಿ ನಡೆದ ಗಲಭೆಯ ವಿಚಾರವನ್ನು ಪ್ರಸ್ತಾಪಿಸಿದ ಸಮಾಜವಾದಿ ಪಕ್ಷದ ಅಬು ಅಜ್ಮಿ, 'ವಂದೇ ಮಾತರಂ' ಘೋಷಣೆಯನ್ನು ಹೇಳುವುದು ನನಗೆ ಸ್ವೀಕಾರಾರ್ಹವಲ್ಲ.. ನಾವು ಇದನ್ನು ಒಪ್ಪುವುದೂ ಇಲ್ಲ. ಭಾರತದಲ್ಲಿ ವಾಸಿಸಬೇಕಾದರೆ ವಂದೇ ಮಾತರಂ ಪಠಿಸಬೇಕು ಎಂದು ಕೆಲವರು ಹೇಳುತ್ತಾರೆ, ನಾವು ಅದನ್ನು ಮಾಡಲು ಸಾಧ್ಯವಿಲ್ಲ, ನಾವು ಒಬ್ಬ ದೇವರನ್ನು ಮಾತ್ರ ನಂಬುತ್ತೇವೆ ಎಂದು ಅವರು ಹೇಳಿದರು.
ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಬು ಅಜ್ಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಸದನದಲ್ಲಿ ಗದ್ದಲ ಏರ್ಪಟ್ಟಿತ್ತು. ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಶಾಸಕರನ್ನು ಶಾಂತಗೊಳ್ಳುವಂತೆ ಮನವಿ ಮಾಡಿದರು.
"ಅಜ್ಮಿ ಅವರ ಕಾಮೆಂಟ್‌ಗಳು ವಿಷಯಕ್ಕೆ ಅಪ್ರಸ್ತುತವಾಗಿದೆ. ಅವರು ಚರ್ಚೆಗಾಗಿ ಪಟ್ಟಿ ಮಾಡಲಾದ ವಿಷಯದ ಮೇಲೆ ಕೇಂದ್ರೀಕರಿಸಬೇಕು" ಎಂದು ನಾರ್ವೇಕರ್ ಹೇಳಿದರು. ಆದರೆ ಶಾಸಕರು ಶಾಂತರಾಗಲ್ಲಿ.. ಸದನದಲ್ಲಿ ಪರಸ್ಪರ ಪ್ರತಿಭಟನೆ ಮುಂದುವರೆಸಿದ ಕಾರಣ ಸ್ಪೀಕರ್ ಸದನವನ್ನು ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


